News Karnataka Kannada
Monday, May 06 2024
ಕರಾವಳಿ

ಮಂಗಳೂರು: ಕರಾವಳಿ ಭಾಗಕ್ಕೆ ಹೈ ವೇವ್‌ ಅಲರ್ಟ್‌ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Mangalore: The Meteorological Department has issued a high wave alert for the coastal area
Photo Credit :

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯೂ ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್‌ ಅಲರ್ಟ್‌”ನ್ನು ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು 42 ಕಿ.ಮೀ ನಷ್ಟು ಉದ್ದದ ಕರಾವಳಿ ತೀರದಲ್ಲಿ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್‌ ಜಾಯ್‌” ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ.

ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ ಸಮುದ್ರ ತೀರಕ್ಕೆ ಪ್ರವೇಶಿಸದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.

ಜೂ. 19 ರವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ. ಅಲ್ಲದೇ, ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಿದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ 107719824-2442590 ದೂರವಾಣಿಗೆ ಸಂಪರ್ಕಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು