News Karnataka Kannada
Thursday, April 18 2024
Cricket
ಮಂಗಳೂರು

ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡಬೇಕಾಗಿದೆ:ಶಾಸಕ ಹರೀಶ್ ಪೂಂಜ

Harish Poonja
Photo Credit :
ಬೆಳ್ತಂಗಡಿ: ಕಳೆದ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು 4 ವರ್ಷಗಳ ಅವಧಿಯಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಈಡೇರಿಸುವ ಕೆಲಸ ಮಾಡಲಾಗಿದ್ದು, ಪಕ್ಷದ ಕಾರ್ಯಕರ್ತರು ತಾಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡಬೇಕಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ.
ಅವರು ಶನಿವಾರ ಅಳದಂಗಡಿ ಸ್ವಜಾಜ್ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಭಾರತೀಯ ಜನತಾ ಪಾರ್ಟಿಯ ನೇತ್ರತ್ವದ ಕೇಂದ್ರ ಹಾಗೂ ಸರಕಾರ ಮಾಡಿರುವ ಕೆಲಸಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಪಕ್ಷವನ್ನು ಸದೃಢಗೊಳಿಸುವ ಕೆಲಸವನ್ನು ನಾವು ಮಾಡಬೇಕಾಗಿದೆ ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಭಾರತೀಯ ಜನತಾ ಪಾರ್ಟಿ ರಾಷ್ಟ ಚಿಂತನೆಯ ಆಧಾರದಲ್ಲಿ ಕೆಲಸವನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಗಲಭೆ ಎಬ್ಬಿಸಿ, ಜನರಲ್ಲಿ ಗೊಂದಲವನ್ನು ಉಂಟು ಮಾಡು, ಬಿಜೆಪಿಯನ್ನು ಸೋಲಿಸಲು ಕಾಂಗ್ರೇಸ್ ಪಕ್ಷದ ಪ್ರಯತ್ನ ಮಾಡುತ್ತಿದೆ. ಬಿಜೆಪಿ ಪ್ರತಿಯೊಬ್ಬ ಕಾರ್ಯಕರ್ತ ನರೇಂದ್ರ ಮೋದಿಯಂತೆ ಕೆಲಸ ಮಾಡಿದರೆ ಕಾಂಗ್ರೇಸ್ ದ್ವಂಸ ಆಗಲಿದೆ ಎಂದರು.
ಸಮಾರೋಪ ಭಾಷಣ ಮಾಡಿದ ಬಿಜೆಪಿ ಹಿರಿಯರ ಪ್ರಕೋಷ್ಠ ರಾಜ್ಯ ಸಂಚಾಲಕ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ , ನಿರ್ದಿಷ್ಟ ವಿಷಾರಧಾರೆ, ರಾಷ್ಠಿಯತೆ,, ಜನಸಾಮಾನ್ಯರ ನಾಡಿಮಿಡಿತದಿಂದ ರಾಜ್ಯದಲ್ಲಿ ನಮ್ಮ ಸರಕಾರ ಪರವಾದ ಭಾವನೆ ಜನರಲ್ಲಿದೆ. ಇದನ್ನು ಉಳಿಸಲು ನಾವು ಕೆಲಸ ಮಾಡಬೇಕಾಗಿದೆ. ಆದರೆ ಕೋರ್ಟ್ ಆದೇಶವನ್ನೇ ಒಪ್ಪದಂತಹ ಸ್ಥಿತಿ ಇರುವಂತ ಒಂದು ವರ್ಗವನ್ನು ಓಲೈಸುವ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ರಾಜ್ಯದ ಪರಿಸ್ಥಿತಿ ಏನಾದೀತು ಎಂಬುದನ್ನು ನಾವು ಜನರಿಗೆ ತಿಳಿಸುವ ಕಾಲ ಬಂದಿದೆ ಎಂದರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ಸಂಘಟನಾತ್ಮಕ ವಿಷಯಗಳ ಬಗ್ಗೆ ಮಾತನಾಡಿದರು. ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು ಇದ್ದರು. ಅಳದಂಗಡಿ ಮಹಾಶಕ್ತಿಕೇಂದ್ರ ಅಧ್ಯಕ್ಷ ಸದಾನಂದ ಉಂಗಿಲಬೈಲ್ ಸ್ವಾಗತಿಸಿದರು. ಶಶಿಧರ್ ಅಳದಂಗಡಿ ವಂದೇಮಾತರಂ ಹಾಡಿದರು. ಸುಧೀರ್ ಸುವರ್ಣ ವೈಯಕ್ತಿಕ ಗೀತೆ ಹಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಮತ್ತು ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ ಕಾರ್ಯಕ್ರಮ ನಿರೂಪಿಸಿದರು. ಅಳದಂಗಡಿ ಮಹಾಶಕ್ತಿಕೇಂದ್ರ ಕಾರ್ಯದರ್ಶಿ ವಿಶ್ವನಾಥ ಹೊಳ್ಳ ವಂದಿಸಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು