News Karnataka Kannada
Monday, April 22 2024
Cricket
ಮಂಗಳೂರು

ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಕೊಲೆ ಪ್ರಕರಣ ದಾಖಲಿಸಿ ರಮನಾಥ ರೈ

Ramanath Rai
Photo Credit :

ಮಂಗಳೂರು : ಗುತ್ತಿಗೆದಾರ ಸಂತೋಷ್ ಪರ್ಸೆಂಟೇಜ್ ಕಮಿಷನ್ ನಿಂದ ನೊಂದು ತನ್ನ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರಣ ಇದು ಹತ್ಯೆಗೆ ಸಮಾನವಾಗಿದ್ದು ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕಿತ್ತು ಹಾಕುವುದು ಮಾತ್ರವಲ್ಲದೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ರಮನಾಥ್ ರೈ ಒತ್ತಾಯಿಸಿದರು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈಶ್ವರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಬೇಕು ಎಂದರು

ಅವರು ಡಿವೈಎಸ್ಪಿ ಗಣಪತಿ ವಿಚಾರದಲ್ಲಿ ಕಾಂಗ್ರೆಸ್ ಪ್ರಕರಣ ಸಿಬಿಐ ತನಿಖೆಗೆ ವಹಿಸಿತ್ತು ಆರೋಪಿತರ ರಾಜೀನಾಮೆ ಪಡೆದಿತ್ತು ಆದರೆ ಇದಕ್ಕೂ ಯಾವುದೇ ಹೋಲಿಕೆ ಮಾಡಲಾಗದು ಮಾನಸಿಕವಾಗಿ ಯಾವುದೇ ಒತ್ತಡವಿಲ್ಲದೆ ಸಂತೋಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಗಂಭೀರ ಪ್ರಕರಣ ಎಂದು ಅವರು ಪ್ರತಿಕ್ರಿಯಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು