News Karnataka Kannada
Monday, April 15 2024
Cricket
ಮಂಗಳೂರು

ಉಸಿರಾಟದ ಸಮಸ್ಯೆ: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು

Sukri Bomma Gowda
Photo Credit : News Kannada

ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿ. ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕೆಲಸಕ್ಕಾಗಿ ಅವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಮದ್ಯ ವ್ಯಸನದಿಂದ ಸಂಭವಿಸಿದ ಗಂಡನ ಸಾವಿನ ಬಳಿಕ ಧೃತಿಗೆಡದ ಸುಕ್ರಜ್ಜಿ 1990 ರ ದಶಕದಲ್ಲಿ ಮದ್ಯ ವಿರೋಧಿ ಆಂದೋಲನವನ್ನು ನಡೆಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು