News Karnataka Kannada
Saturday, April 20 2024
Cricket
ಮಂಗಳೂರು

ಎಸ್ ಡಿ ಎಂ ಶಾಲೆಯಲ್ಲಿ ಉಚಿತ ಯೋಗ ಶಿಬಿರಕ್ಕೆ ಚಾಲನೆ

Untitled 2 Recovered
Photo Credit :

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇವರ ಆಶ್ರಯದಲ್ಲಿ ಎಂಟನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಉಚಿತ ಯೋಗ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಉಜಿರೆ ಎಸ್.ಡಿ.ಎಂ ಯೋಗ ವಿಜ್ಞಾನ ಮಹಾವಿದ್ಯಾಲಯದ ಪ್ರೊಫೆಸರ್, ಡೀನ್ ಡಿವಿಷನ್ ಆಫ್ ನಾಚುರಲ್ ತೆರಪೆಟಿಕ್ಸ್ ಡಾ. ಸುಜಾತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಯೋಗ ಮತ್ತು ಪ್ರಾಣಾಯಾಮಗಳ ಮಹತ್ವವನ್ನು ತಿಳಿಸಿ ವಿಶ್ವ ಯೋಗ ದಿನಾಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಮ್. ಆರ್ ರವರು ವಹಿಸಿದ್ದರು. ಪ್ರವೀಣ್ ನಾಯಕ್, ಡಾ ನಂಜೇಶ್, ಅಶ್ವಿತಾ ಮೋಂತೆರೋ, ಡಾ ಅಶ್ಮಿತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಎನ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಶ್ರೇಯಾಂಸ ಜೈನ್ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು