News Karnataka Kannada
Wednesday, April 17 2024
Cricket
ಮಂಗಳೂರು

ಏ. 26ರಂದು ಬೆಳ್ತಂಗಡಿಯಲ್ಲಿ ಶಾಸಕ ಮಂಜುನಾಥ ಭಂಡಾರಿಯವರಿಂದ ಕ್ಷೇತ್ರವಾರು ಸಭೆ

Untitled 76
Photo Credit :

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಜಿಲ್ಲಾ ಪಂಚಾಯತಿ ವ್ಯಾಪ್ತಿಗಳಲ್ಲಿ ಬರುವ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಕ್ಷದ ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರು, ಪ್ರಮುಖ ನಾಯಕರು, ಹಾಗೂ ಕಾರ್ಯಕರ್ತರ ಜೊತೆ ಕ್ಷೇತ್ರವಾರು ಸಭೆಯನ್ನು ಏಪ್ರಿಲ್ 26ರಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಹಮ್ಮಿಕೊಂಡಿದ್ದಾರೆ.

ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೆ ಹರೀಶ್ ಕುಮಾರ್, ಮಾಜಿ ಶಾಸಕರಾದ ಶ್ರೀ ವಸಂತ ಬಂಗೇರ, ಮಾಜಿ ಸಚಿವರಾದ ಶ್ರೀ ಗಂಗಾಧರ ಗೌಡ, ಹಾಗೂ ರಾಜೀವ್ ಗಾಂಧಿ ಪಂಚಾಯತರಾಜ್ ಸಂಘಟನೆಯ ಜಿಲ್ಲಾ ಸಂಚಾಲಕರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ, ಹಾಗೂ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ರಂಜನ್ ಜಿ ಗೌಡ ಭಾಗವಹಿಸಲಿದ್ದಾರೆ.

ಜಿಲ್ಲಾ ಜಿಲ್ಲಾ ಪಂಚಾಯತ್ ಗಳಾದ ಲಾಯಿಲದಲ್ಲಿ ನಾವೂರು ಹಾಲಿನ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸಭೆ ನಡೆಯಲಿದ್ದು, ಧರ್ಮಸ್ಥಳದಲ್ಲಿ ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಮಧ್ಯಾಹ್ನ 12ಕ್ಕೆ ಹಾಗೂ ಉಜಿರೆಯ ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ಲಬ್ ನಲ್ಲಿ ಮಧ್ಯಾಹ್ನ 2ಕ್ಕೆ ಸಭೆಗಳು ನಡೆಯಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು