News Karnataka Kannada
Thursday, April 25 2024
Cricket
ಮಂಗಳೂರು

`ಕಲ್ಲಡ್ಕ ಪ್ರಭಾಕರ್​ ಭಟ್’​ಗೆ ಎದೆನೋವು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Prabhakara Bhat
Photo Credit :

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎದೆನೋವಿಗೆ ಒಳಗಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ತಜ್ಞ ವೈದ್ಯರಿಂದ ಪ್ರಭಾಕರ್ ಭಟ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರಿಂದ ಮಾಹಿತಿ ಲಭಿಸಿದೆ.

ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ಸಂಜೆಯ ಸುಮಾರಿಗೆ ಎದೆನೋವು ಉಂಟಾಗಿದೆ.ಹೀಗಾಗಿ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾ. ಭಟ್ ಚೇತರಿಸಿಕೊಂಡಿದ್ದು, ಯಾರೂ ಗಾಬರಿಗೆ ಒಳಗಾಗುವುದು ಬೇಡ ಎಂದು ಆಪ್ತ ವಲಯಗಳು ತಿಳಿಸಿವೆ. ಸದ್ಯ ಭಟ್‌ ಅವರ ಆರೋಗ್ಯ ಸ್ಥಿರವಾಗಿದ್ದು, ಆಂಜಿಯೋಗ್ರಾಮ್ ಮಾಡಲು ವೈದ್ಯರು ಸೂಚಿಸಿದ್ದಾರೆ. ಅವರ ಅರೋಗ್ಯದ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಸಿಗಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು