News Karnataka Kannada
Tuesday, April 16 2024
Cricket
ಮಂಗಳೂರು

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ

Janaspandana Sabha at Keravadi, lays foundation stone for works worth Rs 2 crore
Photo Credit :

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಬಂಟ ಸಮಾಜದ ದೈವದ ಮುಕ್ಕಾಲ್ದಿಗಳಿಗೆ  ಗೌರವ ಸನ್ಮಾನ ಕಾರ್ಯಕ್ರಮ ಮೇ ೩ ರಂದು ಮಂಗಳವಾರ  ಮಧ್ಯಾಹ್ನ ೧೧ ಗಂಟೆಗೆ ಬಂಟ್ಸ್  ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಲಿದೆ.

ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ ವಹಿಸಲಿದ್ದಾರೆ.
ಸಮಾರಂಭದಲ್ಲಿ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ  ಶಿಕ್ಷಣ, ಮದುವೆ, ಮನೆ ನಿರ್ಮಾಣ, ಕ್ರೀಡೆ, ವೈದ್ಯಕೀಯ ಮೊದಲಾದ  ಫಲಾನುಭವಿಗಳಿಗೆ  ಚೆಕ್ ಗಳನ್ನು ವಿತರಿಸಲಾಗುವುದು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ,  ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ  ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್,  ಮುಂಬಯಿ ಹೇರಂಬ ಇಂಡಸ್ಟ್ರೀಸ್ ನ ಅಧ್ಯಕ್ಷ, ಒಕ್ಕೂಟದ ನಿರ್ದೇಶಕ ಸದಾಶಿವ ಶೆಟ್ಟಿ ಕುಳೂರು-ಕನ್ಯಾನ, ಮಾಜಿ ಸಚಿವ ಬಿ ನಾಗರಾಜ ಶೆಟ್ಟಿ, ಒಕ್ಕೂಟದ ನಿರ್ದೇಶಕ ಪ್ರವೀಣ್ ಭೋಜ ಶೆಟ್ಟಿ, ಹುಬ್ಬಳ್ಳಿ ಪಂಜುರ್ಲಿ ಗ್ರೂಪ್ ನ ಅಧ್ಯಕ್ಷ ರಾಜೇಂದ್ರ ಶೆಟ್ಟಿ ಹುಬ್ಬಳ್ಳಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ,  ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್ ಉಪಸ್ಥಿತರಿರುವರು. ಸಭೆಯಲ್ಲಿ ವಲಯ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು