News Karnataka Kannada
Wednesday, April 24 2024
Cricket
ಮಂಗಳೂರು

ಡಿವೈಡರ್ ಹಾರಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು: ಮಹಿಳೆ ಗಂಭೀರ

Accident
Photo Credit : News Kannada

ಮಂಗಳೂರು: ಬಿಎಂಡಬ್ಲ್ಯು ಕಾರೊಂದು ಡಿವೈಡರ್ ಹಾರಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಬಲ್ಲಾಳ್ ಭಾಗ್ ನಲ್ಲಿ ಶನಿವಾರ ನಡೆದಿದೆ.

ಈ ಸಂದರ್ಭ ಡಿವೈಡರ್‌ ನಲ್ಲಿ ನಿಂತಿದ್ದ ಮಹಿಳೆಯೂ ಗಾಯಗೊಂಡಿದ್ದಾರೆ. ಬಳಿಕ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೂ ಢಿಕ್ಕಿ ಹೊಡೆಯಿತು. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಕಾರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ.

ಪಿವಿಎಸ್ ಕಡೆಯಿಂದ ಲಾಲ್‌ಬಾಗ್ ಕಡೆಗೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ರಸ್ತೆಗೆ ನುಗ್ಗಿತು. ಈ ಸಂದರ್ಭ ರಸ್ತೆ ದಾಟಲು ಡಿವೈಡರ್ ಮೇಲೆ ನಿಂತಿದ್ದ ಮಹಿಳೆ, ವಿರುದ್ಧ ದಿಕ್ಕಿನಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳೆ ಹಾಗು ಕಾರಿಗೆ ಢಿಕ್ಕಿ ಹೊಡೆಯಿತು. ಇದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಆರೋಪಿ ಕಾರು ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ತಪಾಸಣೆಗೊಳಪಡಿಸಿದ್ದಾರೆ. ಈ ಅಪಘಾತದಿಂದ ಸುಮಾರು ಅರ್ಧ ಗಂಟೆ ಕಾಲ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಮಣ್ಣಗುಡ್ಡೆ ನಿವಾಸಿ ಶ್ರವಣ್‌ ಕುಮಾರ್‌ ಎಂಬಾತ ಕಾರು ಚಲಾಯಿಸಿ ಅಪಘಾತ ನಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆ ಹಾಗು ಡಿವೈಡರ್‌ ನಲ್ಲಿ ನಿಂತಿದ್ದ ಮಹಿಳೆ ಗಾಯಗೊಂಡಿದ್ದಾರೆ. ಗಾಯಗೊಂಡ ವರನ್ನು ಪ್ರೀತಿ ಮನೋಜ್‌, ಅಮೈ ಜಯದೇವನ್‌ ಎಂಬವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರವಣ್‌ ಕುಮಾರ್‌ ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ನಗರ ಕಮಿಷನರ್‌ ಶಶಿಕುಮಾರ್‌ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು