News Karnataka Kannada
Friday, April 12 2024
Cricket
ಮಂಗಳೂರು

ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ; ಮಂಜುನಾಥ ಭಂಡಾರಿ

Demand for amendment of certain rules of Gram Swaraj and Panchayati Raj
Photo Credit : News Kannada

ಈ ವರ್ಷದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಗ್ರಾಮ ಪಂಚಾಯತಿಗೆ ಕೊಡುವಂತಹ ಅನುದಾನ ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಗೌರವಧನ ಮತ್ತು ಇತರ ಭತ್ಯೆಗಳನ್ನು ಹೆಚ್ಚಿಸಬೇಕೆಂದು ಚುನಾಯಿತ ಪ್ರತಿನಿಧಿಗಳಾದ ನಾವು ಸರಕಾರದ ಮುಂದಿಟ್ಟ ಬೇಡಿಕೆಯನ್ನು ನಿರ್ಲಕ್ಷಿಸಿದ್ದಕ್ಕೆ ಅತ್ಯಂತ ಬೇಸರವಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಮಾರ್ಗಸೂಚಿಯಂತೆ ಶೈಕ್ಷಣಿಕ ಕ್ಷೇತ್ರದಲ್ಲಿ ಯಾವುದೇ ಮಹತ್ವದ ಘೋಷಣೆಯಾಗಿಲ್ಲ ಹಾಗೂ ಈಗಾಗಲೇ ಇದ್ದ ಸರಕಾರಿ ಕಾಲೇಜುಗಳನ್ನು ನಡೆಸಲು ಸಾಧ್ಯವಾಗದ ಸರಕಾರ ಹಳೆಯ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಹೆಸರನ್ನು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂದು ಮರು ನಾಮಕರಣ ಮಾಡಲು ಹೊರಟ ನಿರ್ಧಾರ ಅತ್ಯಂತ ನಿರಾಶಾದಾಯಕವಾಗಿದೆ.

ನರೇಂದ್ರ ಮೋದಿಯವರ ಹಳೆಯ 2 ಕೋಟಿ ಉದ್ಯೋಗ ಸೃಷ್ಟಿ ಘೋಷಣೆಗೆ ವಿರುದ್ಧವಾಗಿ ಈ ವರ್ಷದ ಕೇಂದ್ರ ಸರಕಾರದ ಬಜೆಟ್ ನಲ್ಲಿ ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂಬ ಘೋಷಣೆಯಾದರೂ ಮುಖ್ಯಮಂತ್ರಿಯವರು ಉದ್ಯೋಗ ಸೃಷ್ಟಿಯ ಬಗ್ಗೆ ನಿರ್ಲಕ್ಷ ತೋರಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ  ಮಂಜುನಾಥ ಭಂಡಾರಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು