News Karnataka Kannada
Monday, April 22 2024
Cricket
ಮಂಗಳೂರು

ಮಂಗಳೂರು: ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, ಐವರು ಸಾವು

Gas Leak (1)
Photo Credit :

ಮಂಗಳೂರು : ಎಸ್‌ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಸೇರಿ ಐವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮಿರಾಜುಲ್​ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬ್‌ಉಲ್ಲಾ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥ ಕಾರ್ಮಿಕರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ದುರಂತ ನಡೆದ ಪ್ರದೇಶವು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಗೆ ಬರಲಿದ್ದು, ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್ ಶುಚಿಗೊಳಿಸಲು ಕೆಳಗಿಳಿದಿದ್ದು, ಈ ವೇಳೆ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಆತನನ್ನು ರಕ್ಷಣೆ ಮಾಡಲೆಂದು ಹೋದ 8 ಮಂದಿಯ ಉಸಿರಾಟ ಕೂಡ ಏರುಪೇರಾಗಿದೆ ಎನ್ನಲಾಗಿದೆ.

ಕಾರ್ಖಾನೆಗೆ ವಿವಿಧೆಡೆಯಿಂದ ಬರುವ ಮೀನಿನ ತ್ಯಾಜ್ಯವನ್ನು ಈ ಬೃಹತ್ ಟ್ಯಾಂಕ್​ನಲ್ಲಿ ಮೊದಲು ಇರಿಸಿ, ಶುದ್ಧೀಕರಿಸಲಾಗುತ್ತಿತ್ತು. ಇದು ಸುಮಾರು 20 ಅಡಿ ಆಳವಾಗಿದೆ.

ಮೀನಿನ ತ್ಯಾಜ್ಯವನ್ನು ಸಂಸ್ಕರಿಸುವಾಗ ಬಳಕೆ ಮಾಡುವ ವಿಷಾನಿಲ ಸೋರಿಕೆಯಿಂದ ಈ ದುರ್ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ. ಅವಘಡ ನಡೆದ ಹಿನ್ನಲೆಯಲ್ಲಿ ಫ್ಯಾಕ್ಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು