News Karnataka Kannada
Wednesday, April 24 2024
Cricket
ಮಂಗಳೂರು

ಮಾಜಿ ಸಚಿವ ಈಶ್ವರಪ್ಪನವರ ಬಂಧನವಾಗುವವರೆಗೂ ಹೋರಾಟ ಮಾಡುತ್ತೇವೆ: ಹರೀಶ್ ಕುಮಾರ್

Harish Kumar
Photo Credit :

ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜೀನಾಮೆ ನೀಡಿರುವ ಮಾಜಿ ಸಚಿವ ಈಶ್ವರಪ್ಪನವರ ಬಂಧನವಾಗುವವರೆಗೂ ಜಿಲ್ಲೆಯ ಪ್ರತಿ ಬ್ಲಾಕ್ ಮತ್ತು ವಿಧಾನಸಭಾ ಕ್ಷೇತ್ರದಲ್ಲೂ ಹೋರಾಟ ನಡೆಸುವುದಾಗಿ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ .

ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಶ್ವರಪ್ಪ ರಾಜೀನಾಮೆ ನೀಡುವ ಮೂಲಕ ತಪ್ಪು ಮಾಡಿದರು ಎಂದು ಒಪ್ಪಿಕೊಂಡಂತಾಗಿದೆ .

ಹಾಗಾಗಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಅಲ್ಲದೆ ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಇಲ್ಲದಿದ್ದರೆ 2ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು .

ಯಾವುದೇ ಕಾರಣಕ್ಕೂ ರಾಜ್ಯ ಸರಕಾರದ ಅಧೀನ ಸಂಸ್ಥೆಗಳಿಂದ ತನಿಖೆ ನಡೆಸಬಾರದೆಂದು ಹರೀಶ್ ಕುಮಾರ್ ಒತ್ತಾಯಿಸಿದರು .ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪರ ಮೌಖಿಕ ಆದೇಶದ ಮೇರೆಗೆ 4. 18 ಕೋಟಿ₹ ಕಾಮಗಾರಿ ನಡೆಸಿದ್ದರಿಂದ ಆ ಮೊತ್ತವನ್ನು ಸರಕಾರದಿಂದ ಭರಿಸಲು ಈಶ್ವರಪ್ಪ ಅವರೇ ಭರಿಸಬೇಕು . ಈಶ್ವರಪ್ಪ ಅವರ ಆಸ್ತಿ ಮುಟ್ಟುಗೋಲು ಹಾಕಿ ಹಣ ನೀಡಲಿ ಎಂದು ಒತ್ತಾಯಿಸಿದರು .

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ . ಮಾಜಿ ಸಚಿವ ಅಭಯಚಂದ್ರ ಜೈನ್ , ಮಾಜಿ ಶಾಸಕ ಐವನ್ ಡಿಸೋಜ , ಕೆಪಿಸಿಸಿ ಉಪಾಧ್ಯಕ್ಷ ಪಿ ವಿ ಮೋಹನ್ , ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮನ್ , ಪಕ್ಷದ ಮುಖಂಡರಾದ ನೀರಜ್ ಪಾಲ್ , ಶುಭೋದಯ ಆಳ್ವ , ಕೃಪಾ ಅಮರ್ ಆಳ್ವ , ಆಶಿತ್ ಪಿರೇರಾ , ದೀಕ್ಷಿತ್ ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು