News Karnataka Kannada
Saturday, April 13 2024
Cricket
ಮಂಗಳೂರು

ಮೇ.25 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳ ಸಾಮೂಹಿಕ ವಿವಾಹ

Children born late in marriage are a problem!
Photo Credit :

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ.25 ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ.

ಮೇ.4 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆದುದರಿoದ ಪುಣ್ಯ ಕ್ಷೇತ್ರದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಸರಳ ಸಾಮೂಹಿಕ ವಿವಾಹವಾಗಲು ಅಪೇಕ್ಷಿಸುವವರು ಶೀಘ್ರವೇ ಶ್ರೀ ದೇವಳದ ಕಚೇರಿಯಿಂದ ಅರ್ಜಿ ಪಡೆದು ತಮ್ಮ ಅರ್ಜಿಯನ್ನು ಸಲ್ಲಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 08257-281224, 236200, 281700, 281423 ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.ಅಥವಾ ಶ್ರೀ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಕಟಕ ಲಗ್ನ ಸುಮೂಹುರ್ತ:
ಮೇ.25 ರಂದು ಬೆಳಗ್ಗೆ 10.50 ರಿಂದ 11.40ರ ವರೆಗೆ ನೆರವೇರುವ ಕಟಕ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದೆ.ಮೇ.೪ ವಧು-ವರರು ನಿಗದಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.ಮೇ.8 ರoದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು.ಮೇ.13  ಅಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾದರೆ, ಮೇ.15 ರಂದು ವಧುವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
ಅಗತ್ಯ ದಾಖಲೆಗಳು:
ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 2 ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್‌ನಿoದ ಅಥವಾ ಸಂಬoಪಟ್ಟ ಸರಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಸಹಾಯಹಸ್ತ:
ಸರಳ ಸಾಮೂಹಿಕ ವಿವಾಹವಾಗುವ ವರನಿಗೆ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.5 ಸಾವಿರ ಹಾಗೂ ವಧುವಿಗೆ ರೂ.10  ಸಾವಿರ ನೀಡಲಾಗುವುದು. ಸುಮಾರು ರೂ 40  ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು. ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು. ಸರಳ ಸಾಮೂಹಿಕ ವಿವಾಹವಾಗುವ ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ರೂ.10 ಸಾವಿರ ನಿಶ್ಚಿತ ಠೇವಣಿ ಸೌಲಭ್ಯವನ್ನು ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಠ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ ರೂ.50 ಸಾವಿರಗಳನ್ನು ಒದಗಿಸಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು