News Karnataka Kannada
Friday, April 19 2024
Cricket
ಮಂಗಳೂರು

ಮೇ 7- 8ರಂದು ನಡೆಯಲಿದೆ ದಡ್ಡಲಕಾಡು ಸಂಭ್ರಮೋತ್ಸವ

Inauguration of administrative office of Federation of Bunts Associations at Mulki on April 5
Photo Credit :
ಬಂಟ್ವಾಳ: ಮೂಡನಡುಗೋಡು ಗ್ರಾಮದ ದಡ್ಡಲಕಾಡು ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರೂ ಹಾಗೂ  ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ರಾಜ್ಯಾಧ್ಯಕ್ಷರೂ ಆಗಿರುವ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ದಡ್ಡಲಕಾಡು ಸಂಭ್ರಮೋತ್ಸವ ಮೇ 7 ಮತ್ತು 8ರಂದು ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಠಾರದಲ್ಲಿ ನಡೆಯಲಿದೆ.
ಈ ವಿಷಯವನ್ನು ಶಾಲೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ತಿಳಿಸಿದರು. ಕೇವಲ 28 ವಿದ್ಯಾರ್ಥಿಗಳನ್ನು ಹೊಂದಿದ್ದ ಈ ಶಾಲೆಯಲ್ಲಿ ಇದೀಗ 1200 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಭ್ರಮೋತ್ಸವ ಹಾಗೂ ನೂತನ ಕೊಠಡಿಗಳು ಮತ್ತು ಕಲಿಕಾ ಭವನ ಉದ್ಘಾಟನೆ ನಡೆಯಲಿದ್ದು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉಪಸ್ಥಿತಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸುವರು ಎಂದರು.
ಶನಿವಾರ ಬೆಳಗ್ಗೆ 9ಕ್ಕೆ ವಿದ್ಯಾದೇಗುಲ ಹೊರೆಕಾಣಿಕೆ ಮೆರವಣಿಗೆ, ವಿಶೇಷ ವಾಹನ ಜಾಥಾ ನಡೆಯಲಿದೆ. ಸಂಜೆ 4ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ತು ಸದಸ್ಯರಾದ ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್ ಮತ್ತು ಮಂಜುನಾಥ ಭಂಡಾಡರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮತ್ತಿತರರು ಭಾಗವಹಿಸುವರು ಎಂದರು. ಮೇ 8ರಂದು ಸಂಜೆ 6ಕ್ಕೆ ದಿಕ್ಸೂಚಿ ಭಾಷಣವನ್ನು ಕುಡಚಿ ಶಾಸಕಪಿ. ರಾಜೀವ್ ನೆರವೇರಿಸುವರು. ಸಂಜೆ 7ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಹರೀಶ್ ಪೂಂಜ, ಬಿ.ಎಂ ಸುಕುಮಾರ್ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಪುರುಷೋತ್ತಮ ಅಂಚನ್, ಮುಖ್ಯ ಶಿಕ್ಷಕ ರಮಾನಂದ, ಪ್ರಮುಖರಾದ ರಾಮಚಂದ್ರ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು