News Karnataka Kannada
Wednesday, April 17 2024
Cricket
ಮಂಗಳೂರು

ರಾಜ್ಯದಲ್ಲಿ ಅಶಾಂತಿ ವಾತಾವರಣ: ರಾಜ್ಯ ಸರಕಾರ ಕಣ್ಣು ಮುಚ್ಚಿ ಕುಳಿತಿದೆ-ಐವನ್ ಡಿಸೋಜಾ

Ivan D'Souza demands Rs 25 lakh compensation for Masood's family
Photo Credit :

ಮಂಗಳೂರು : ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿಯಾಗಿರುವ ಬಗ್ಗೆ ರಾಜ್ಯ ಸರಕಾರ ಕಣ್ಣು ಮುಚ್ಚಿ ಕುಳಿತಿದೆ. ಮಾತ್ರವಲ್ಲದೆ, ಪಕ್ಷದ ಕಾರ್ಯಕರ್ತರು ಹಾಗೂ ಸಹ ಸಂಘಟನೆಗಳ ಕೃತ್ಯವನ್ನು ಸಮರ್ಥಿಸುವ ಮೂಲಕ ಪರೋಕ್ಷವಾಗಿ ಲೈಸೆನ್ಸ್ ನೀಡಿ ಪ್ರಚೋದಿಸುತ್ತಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜಾ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಆರೋಪ ಮಾಡಿದ ಅವರು, ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವುದು ಸರಕಾರದ ಜವಾಬ್ಧಾರಿ. ಆದರೆ ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿರುವ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸರಕಾರಕ್ಕೆ ಅಧಿಕಾರದಲ್ಲಿರಲು ಅರ್ಹತೆ ಇಲ್ಲ ಎಂದರು.

ಹಿಜಾಬ್ ವಿವಾದ, ದೇವಸ್ಥಾನಗಳಲ್ಲಿ ವ್ಯಾಪಾರ, ಶಾಲೆಗಳಲ್ಲಿ ಭಗವದ್ಗೀತೆ, ಹಲಾಲ್ ಕಟ್, ಜಟ್ಕಾ ಕಟ್ ವಿಚಾರದಲ್ಲಿ ಗೊಂದಲ ಸೃಷ್ಟಿಯ ಹೇಳಿಕೆಗಳನ್ನು ಶಾಸಕರು, ಸಚಿವರೇ ನೀಡುತ್ತಿದ್ದಾರೆ. ಈ ರೀತಿ ಕೋಮು ದ್ವೇಷಕ್ಕೆ ಬೆಂಬಲ ನೀಡುವ, ಸಮರ್ಥಿಸುವ ಪರಿಪಾಠವಾಗಲಿ, ಇತಿಹಾಸವಾಗಲಿ ಜಗತ್ತಿನಲ್ಲಿ ಎಲ್ಲಿಯೂ ನಡೆದಿಲ್ಲ. ಈ ರೀತಿ ಒಂದು ಧರ್ಮವನ್ನು ಎತ್ತಿ ಹಿಡಿದು ಸಮಾಜದಲ್ಲಿ ಒಡಕು ಮೂಡಿಸುವುದರಿಂದ ದೊಡ್ಡ ಮಟ್ಟದ ಲಾಭವಾಗುವತೆ ಎಂಬ ಭಾನನೆ ತಪ್ಪು. ಪ್ರಜ್ಞಾವಂತ ಸಮಾಜದ ಜನರಿಗೆ ಎಲ್ಲವೂ ಅರಿವಾಗುತ್ತದೆ. ಇಂತಹ ಕೃತ್ಯಗಳ ಮೂಲಕ ಬಿಜೆಪಿ ತನಗನೆ ತಾನೇ ಗಂಡಾಂತರವನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಸಿ.ಎಂ. ಮುಸ್ತಫಾ, ದೀಕ್ಷಿತ್ ಅತ್ತಾವರ, ಮೀನಾ ಟೆಲ್ಲಿಸ್, ಚಿತ್ತರಂಜನ್, ಹುಸೇನ್ ಕೂಳೂರು, ಅಶಿತ್ ಪಿರೇರಾ, ಅಲ್ವಿನ್ ಡಿಕುನ್ನಾ, ಹಸನ್ ಫಳ್ನೀರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು