News Karnataka Kannada
Thursday, April 25 2024
Cricket
ಮಂಗಳೂರು

ರುಡ್‍ಸೆಟ್ ಸಂಸ್ಥೆ ಉಜಿರೆಯಲ್ಲಿ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Rood Set
Photo Credit :

ಬೆಳ್ತಂಗಡಿ : ಜೀವನದಲ್ಲಿ ಬರುವ ಸಮಸ್ಯೆಗಳು ವ್ಯಕ್ತಿಯನ್ನು ಸಕ್ರೀಯವಾಗಿರಿಸುತ್ತವೆ. ಸಮಾಜದಿಂದ ಮತ್ತು ಸಂಸ್ಥೆಯಿಂದ ಏನನ್ನು ಪಡೆದಿರುವಿರೊ ಅದನ್ನು ಹಿಂದಿರುಗಿಸುವ ಕಾರ್ಯವನ್ನು ಇಲ್ಲಿಂದ ತೆರಳಿದ ಕೂಡಲೇ ಆರಂಭಿಸಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.

ಅವರು ರುಡ್‍ಸೆಟ್ ಸಂಸ್ಥೆ ಉಜಿರೆಯಲ್ಲಿ ನಡೆದ ಮೊಬೈಲ್ ರಿಪೇರಿ ಮತ್ತು ಇಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ಈ ಎರಡೂ ತರಬೇತಿಗಳ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಬಾಗವಹಿಸಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಹೆತ್ತವರನ್ನು ಗೌರವಿಸಿ ಅವರು ನೀಡಿದ ಸಂಸ್ಕಾರವನ್ನು ಅನುಸರಿಸಿ ಮುನ್ನಡೆಯುವವನು ಒಬ್ಬ ಒಳ್ಳೆಯ ನಾಗರಿಕನಾಗುತ್ತಾನೆ. ಈ ಸಂಸ್ಥೆ ನೀಡಿರುವ ವಿದ್ಯೆ ನಿಮ್ಮನ್ನು ವಿಚಾರವಂತರನ್ನಾಗಿಸಿದೆ, ಆದರೆ ಆಚಾರವಂತರಾಗುವಲ್ಲಿ ನಿಮ್ಮ ಪ್ರಾಮಾಣಿಕ ಪ್ರಯತ್ನ ಅತೀ ಮುಖ್ಯ ಎಂದು ಕಿವಿ ಮಾತು ಹೇಳಿದರು.

ಅತಿ ಕಿರಿಯ ವಯಸ್ಸಿನಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ಹೊತ್ತ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಲ್ಕು ದಶಕಗಳ ಹಿಂದೆ ಆರಂಭಿಸಿದ ಈ ಸಂಸ್ಥೆ ಇಂದು ದೇಶವ್ಯಾಪಿ ಕಾರ್ಯ ನಿರ್ವಹಿಸುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ ಕಲ್ಲಾಪುರ ರವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿರ್ದೇಶಕ ಎಂ. ಸುರೇಶ್ ರವರು ಸ್ವಾಗತಿಸಿ ತರಬೇತಿಯ ಹಿನ್ನೋಟವನ್ನು ನೀಡಿದರು.

ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿ, ಹಿರಿಯ ಉಪನ್ಯಾಸಕರಾದ ಶ್ರೀಮತಿ ಅನಸೂಯ ಧನ್ಯವಾದವಿತ್ತರು. ಎರಡೂ ತರಬೇತಿಯಲ್ಲಿ ಓಟ್ಟು 70 ಶಿಬಿರಾರ್ಥಿಗಳು ಭಾಗವಹಿಸಿ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಮೆನ್ಸ್ ಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿ ಮತ್ತು ಆರ್ಥಿಕ ಸಾಕ್ಷರತಾ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ತರಬೇತಿಯ ಓಟ್ಟು 56 ಶಿಬಿರಾರ್ಥಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು