News Karnataka Kannada
Thursday, April 18 2024
Cricket
ಮಂಗಳೂರು

ವಾಹನವೊಂದಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಜಗಳ : ಇಬ್ಬರ ಸೆರೆ

Untitled 132
Photo Credit : News Kannada
ಬಂಟ್ವಾಳ : ವಾಹನವೊಂದಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಮಾತಿಗೆ ಮಾತಿಗೆ ಬೆಳೆದು ಬೆಂಗಳೂರು ಮೂಲದ ವ್ಯಕ್ತಿಯೋರ್ವನಿಗೆ ಮನೆಮಂದಿಯ ಎದುರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಸಹೋದರಿಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.
  ಮಂಗಳೂರು ಕಣ್ಣೂರು ನಿವಾಸಿಗಳಾದ ಇಸ್ಮಾಯಿಲ್ ಯಾನೆ ಬಾತಿಶ್ ಹಾಗೂ ಯಸೀನ್ ಬಾಧಿತ ಆರೋಪಿಗಳು
 ಬ್ರಹ್ಮರಕೂಟ್ಲು ಟೋಲ್ ನಲ್ಲಿ ಎರಡು ಕಾರುಗಳು  ಸೈಡ್ ಕೊಡುವ ವಿಚಾರದಲ್ಲಿ ಕಾರೊಂದರ ಸೈಡ್ ಮಿರರ್ ಗೆ ಡಿಕ್ಕಿಯಾಗಿದೆ. ಈ ವಿಚಾರದಲ್ಲಿ ಮಾತಿಗೆ ಮಾತಿಗೆ ಬೆಳೆದು ಹಲ್ಲೆ ನಡೆಸಿದ್ದಾರೆ.
  ಬೆಂಗಳೂರು ಮೂಲದ ನಿವಾಸಿ ಭಾಸ್ಕರ್ ಪೈ ಅವರು ಉಡುಪಿಗೆ ಕಾರ್ಯಕ್ರಮವೊಂದಕ್ಕೆ  ಮನೆಮಂದಿಯ ಜೊತೆಯಲ್ಲಿ ತೆರಳಿ ಕಾರ್ಯಕ್ರಮ ಮುಗಿಸಿ ವಾಪಸು ಆಗುವ ಸಂದರ್ಭದಲ್ಲಿ ಬ್ರಹ್ಮರಕೋಟ್ಲು ಟೋಲ್ ಗೇಟ್ ನಲ್ಲಿ ಇಬ್ಬರು ಸೇರಿ ಮನೆಯವರ ಎದುರಿನಲ್ಲಿಯೇ ಮಾರಣಾಂತಿಕ ವಾಗಿ ಹಲ್ಲೆ ನಡೆಸಿ ನೆಲಕ್ಕುರಳಿಸಿ ಕಾಲಿನಿಂದ ಒದೆಯುವ ದೃಶ್ಯ ಹಾಗೂ ಮನೆಮಂದಿ ಬಿಡುವಂತೆ ಗೊಳಾಡುವ ದೃಶ್ಯ ಟೋಲ್ ಗೇಟ್ ನಲ್ಲಿರುವ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ.
 ಭಾಸ್ಕರ್ ಪೈ ಅವರ ದೂರಿನಂತೆ  ವಿಡಿಯೋ ಆಧಾರದ ಮೇಲೆ ಪೋಲೀಸರು ಕಣ್ಣೂರು ನಿವಾಸಿಗಳಾದ ಸಹೋದರ ರನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.
   ಡಿ.ವೈ.ಎಸ್.ಪಿ.ಪ್ರತಾಪ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರ ನಿರ್ದೇಶನದಂತೆ ನಗರ ಠಾಣಾ ಎಸ್.ಐ.ಅವಿನಾಶ್ ಗೌಡ ಅವರ ನೇತ್ರತ್ವದ ತಂಡ ಆರೋಪಿ ಗಳನ್ನು ಬಂಧಿಸಿ ದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು