News Karnataka Kannada
Tuesday, April 23 2024
Cricket
ಮಂಗಳೂರು

ಸಮವಸ್ತ್ರದಲ್ಲೂ ಸರಕಾರದ ಹಗರಣ – ಸಚಿವರ ರಾಜಿನಾಮೆಗೆ ಆಗ್ರಹಿಸಿದ ಕ್ಯಾಂಪಸ್ ಫ್ರಂಟ್

Mangalore
Photo Credit :

ಮಂಗಳೂರು : ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿತರಿಸುವ ಸಮವಸ್ತ್ರದಲ್ಲಿ ಬಹು ಕೋಟಿಯ ಹಗರಣ ಬೆಳಕಿಗೆ ಬಂದಿದ್ದು ಇದು ಶಿಕ್ಷಣ ಸಚಿವರ ಕಮಿಷನ್ ದಂಧೆಯಾಗಿದೆ.

ನಿರಂತರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾ ಸಮಿತಿ ವತಿಯಿಂದ ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಆರ್ ಟಿ ಇ ಕಾಯ್ದೆಯಡಿ ಬರುವ ವಿದ್ಯಾರ್ಥಿಗಳಿಗೆ 2019 ರ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಲ್ಲಿ ಸರಕಾರವು ಹೊಲಿದ ಸಮವಸ್ತ್ರ ನೀಡಬೇಕೆಂದು ಹೇಳಿದೆ.

ಈ ಹಿಂದೆ ಖಾಸಗಿ ಸಂಸ್ಥೆಗಳ ಮೂಲಕ ಸರಕಾರ ನೀಡಿದ್ದ ಟೆಂಡರ್ ಪ್ರಕಾರ ಕೇವಲ 230 ರೂ ಗೆ ಹೊಲಿದ ಎರಡು ಜೊತೆ ಸಮವಸ್ತ್ರ ಜೊತೆಗೆ ಶೂ, ಸೋಕ್ಸ್ ಹಾಗೂ ಟೈ ಕೂಡ ಎಸ್ ಡಿ ಎಂ ಸಿ ಮುಖಾಂತರ ವಿತರಣೆ ಮಾಡಲಾಗಿತ್ತು.

ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉದ್ಯೋಗವಾಗುತ್ತಿದ್ದು ಆದರೆ ಇದೀಗ ಸರಕಾರವು ಎಸ್ ಡಿ ಎಂ ಸಿಯನ್ನು ಕಡೆಗಣಿಸಿ, ಕೇವಲ ಕಮಿಷನ್ ವ್ಯಾವೋಹದಿಂದ ಮಹಾರಾಷ್ಟ್ರ ಮೂಲದ ಕಂಪೆನಿಗೆ ಟೆಂಡರ್ ನೀಡಿ 250 ರೂ ಗಳಂತೆ ಹೊಲಿಯದ ಬಟ್ಟೆಯನ್ನು ನೀಡಲು ಮುಂದಾಗಿದೆ.

ಈ ಮುಖಾಂತರ ಬಹು ಕೋಟಿಯ ಹಗರಣ ನಡೆದಿದೆ ಎಂದು ಅಂದಾಜಿಸಲಾಗಿದೆ. ಶಿಕ್ಷಣ ಸಚಿವರು ಈ ಹಗರಣದ ಹಿಂದೆ ಕಮಿಷನ್ ದಂಧೆ ನಡೆಸುತ್ತಿದ್ದು ಉಚ್ಛ ನ್ಯಾಯಾಲಯದ ತೀರ್ಪನ್ನು ಕೂಡ ಪರಿಗಣಿಸದೆ ನ್ಯಾಯಾಲಯದ ನಿಂದನೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಕಮಿಷನ್ ದಂಧೆ ನಡೆಸಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರು ಶೀಘ್ರ ರಾಜಿನಾಮೆ ನೀಡಬೇಕೆಂದು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಾಧೀಕ್ ಜಾರತ್ತಾರ್ ಹೇಳಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾಧ್ಯಕ್ಷ ತಾಜುದ್ದೀನ್, ಕಾರ್ಯದರ್ಶಿ ಸಂಶುದ್ದೀನ್, ಮಂಗಳೂರು ನಗರಾಧ್ಯಕ್ಷ ಶರ್ಫುಧ್ಧೀನ್ ಬಜ್ಪೆ ,ಕಾರ್ಯದರ್ಶಿ ಹಫೀಝ್ ,ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಪೊರ್ಕೋಡಿ, ಸರಫರಾಝ್ ಹಾಗೂ ಜಿಲ್ಲಾ ನಾಯಕಿಯರಾದ ಶಝ್ಮ, ಅಝ್ಶೀನ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು