ಮಂಗಳೂರು : ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.೧೨ರ ಗುರುವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರಾದ ಸುಧಾಕರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹಾಜರಿದ್ದರು.
—