Categories: ಮಂಗಳೂರು

ಅಕ್ರಮವಾಗಿ ಶೇಖರಿಸಿಟ್ಟ ಪಡಿತ ಚೀಟಿಯ 14 ಕ್ವಿಂಟಾಲ್ ಅಕ್ಕಿ ವಶ

ಬೆಳ್ತಂಗಡಿ: ಇಲ್ಲಿನ ಗೇರುಕಟ್ಟೆ ಸಮೀಪದ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟ 14 ಕ್ವಿಂಟಾಲ್ ಗೂ ಅಧಿಕ ಅನ್ನಭಾಗ್ಯ ಪಡಿತರವನ್ನು ಜೂ.1 ರಂದು ಸಂಜೆ 5 ಗಂಟೆ ಸುಮಾರಿಗೆ ತಹಶೀಲ್ದಾರ್ ಸಮ್ಮುಖದಲ್ಲಿ ವಶಕ್ಕೆ ಪಡೆಯಲಾಗಿದೆ.
ಗೇರುಕಟ್ಟೆ ಸಮೀಪದ ಎಸ್.ವಿ. ಟ್ರೇಡರ್ಸ್ ನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು ವಾಹನದಲ್ಲಿ ಸಾಗಾಟಕ್ಕೆ ಮಾಡಲು ಯತ್ನಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.

ಜಪ್ತಿವೇಳೆ 14 ಕ್ವಿಂಟಾಲ್ ಗೂ ಅಧಿಕ ಪಡಿತರ ಕಂಡುಬಂದಿದೆ. ಈ ಕುರಿತು ತಹಶೀಲ್ದಾರ್ ಮಹೇಶ್ ಜೆ., ಆಹಾರ ನಿರೀಕ್ಷಕರಾದ ವಿಶ್ವ, ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಸ್ಥಳದಲ್ಲಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಎಸ್.ಐ. ನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಒಂದು ವಾರಗಳ ಹಿಂದೆ ಕಕ್ಕಿಂಜೆಯಿಂದ ಮೂಡಿಗೆರೆಗೆ ಸಾಗಿಸುತ್ತಿದ್ದ 33 ಕ್ವಿಂಟಾಲ್ ಅಕ್ರಮ ಪಡಿತರವನ್ನು ಟೆಂಪೋ ಸಹಿತ ಚಾರ್ಮಾಡಿ ಚೆಕ್ ಫೊಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿತ್ತು. ಇದೀಗ ಎರಡನೇ ಪ್ರಕರಣ ಬೆಳಕಿಗೆ ಬಂದಿದೆ.

ದ.ಕ.ಜಿಲ್ಲೆಯಲ್ಲಿ ಇಂತಹಾ ಪ್ರಕರಣ ಆಗಾಗ ಕಂಡು ಬರುತ್ತಿದ್ದು, ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ.

Sneha Gowda

Recent Posts

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

21 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

41 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

1 hour ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

1 hour ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

1 hour ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

2 hours ago