ಮಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್ ಮೇಲ್ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕ ಹಾಗೂ ಆತನ ಪತ್ನಿಯ ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಶಿಕ್ಷಕ ಸಮಯ ನೋಡಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.
ಶಿಕ್ಷಕ ಗುರುರಾಜ್ ಕೃತ್ಯಕ್ಕೆ ಆತನ ಪತ್ನಿಯೂ ಸಾಥ್ ನೀಡಿದ್ದಾಳೆ0ದು ತಿಳಿಸಲಾಗಿದೆ.
ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ ಗುರುರಾಜ್, ಆಕೆಯನ್ನು ವಿವಸ್ತ್ರಗೊಳಿಸಿ ಫೋಟೋಗಳನ್ನು ತೆಗೆಯುತ್ತಿದ್ದ,
ಆ ಫೋಟೋಗಳನ್ನು ತೋರಿಸಿ ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ ಎಂದು ಆರೋಪಿಸಲಾಗಿದೆ.