News Karnataka Kannada
Saturday, May 04 2024
ಮಂಗಳೂರು

ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ ಆರೋಪಿಗಳ ಬಂಧನ

New Project 2021 11 07t103116.938
Photo Credit :

ಮಂಗಳೂರು:ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ .

ಯುವತಿ ಜತೆಗೆ ಠಾಣೆಗೆ ಬಂದಿದ್ದ ತಾಯಿ ತನ್ನ ಮಗಳಿಗೆ ಫರಂಗಿಪೇಟೆಯ ರಿಕ್ಷಾ ಚಾಲಕ ರಿಜ್ವಾನ್ ಎಂಬಾತ ಮೈಕೈ ಮುಟ್ಟಿ ಲೈಂಗಿಕ ಶೋಷಣೆ ಮಾಡಿದ್ದಾನೆಂದು ದೂರು ನೀಡಿದ್ದರು ಇದರ ಬೆನ್ನಲ್ಲೇ ನವೆಂಬರ್ ಐದರಂದು ಅದೇ ಯುವತಿ ಮತ್ತೊಂದು ದೂರು ನೀಡಿದ್ದು 5ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ಆ ಬಳಿಕ ತಾವಿದ್ದಲ್ಲಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ ಅನಂತರ ಈ ಬಗ್ಗೆ ಯಾರಿಗಾದರೂ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಳು . 2ಘಟನೆಗಳ ಬಗ್ಗೆ ಪೋಕ್ಸೊ ಕಾಯ್ದೆಯಡಿ ಕೇಸು ದಾಖಲಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಫರಂಗಿಪೇಟೆಯ ರಿಜ್ವಾನ್ ಅರ್ಕುಳದ ಮೊಹಮ್ಮದ್ ಖಾಸಿಂ ಅಜ್ಮಲ್ ಹುಸೇನ್ ಎಂಬುವರು ಬಂಧಿತರಾಗಿದ್ದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು