ಮಂಗಳೂರು: ಇತ್ತೀಚೆಗೆ ನಗರದ ನಂದಿಗುಡ್ಡೆಯ ಫ್ಲಾಟ್ ವೊಂದರಲ್ಲಿ ನಡೆಯುತ್ತಿದ್ದ ಅಪ್ರಾಪ್ತ ವಯಸ್ಕರ ಹಾಗೂ ಮಹಿಳೆ ಮತ್ತು ಯುವತಿಯ ಮಾನವ ಕಳ್ಳ ಸಾಗಾಣಿಕೆ ವೇಶ್ಯಾವಾಟಿಕೆ ಅಂತಹ ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಓರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ .
ಅಬ್ದುಲ್ ರಾಝಿಕ್ ಉಳ್ಳಾಲ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಇನ್ನೋರ್ವ ಆರೋಪಿ ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ .
ಈ ಹಿನ್ನೆಲೆ ಮಂಗಳೂರು ಸಿಸಿಬಿ ಪೊಲೀಸರು ಈಗಾಗಲೇ ತನಿಖೆಯನ್ನು ಕೈಗೊಂಡಿದ್ದು ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಒಟ್ಟು ಹತ್ತು ಪ್ರಕರಣಗಳು ದಾಖಲಾಗಿರುತ್ತದೆ .
ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೂ ಒಟ್ಟು ಹದಿನೈದು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.