News Karnataka Kannada
Monday, May 06 2024
ಮಂಗಳೂರು

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಇಂದಿನಿಂದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಸಾಧ್ಯತೆ
Photo Credit :

 ಮಂಗಳೂರು:  ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ತನ್ನ ತೀವ್ರತೆ ಕಳೆದುಕೊಂಡು ದುರ್ಬಲವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಕ್ಷೀಣವಾಗಿದೆ.

ಶನಿವಾರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕೊಡಗು, ಆಗುಂಬೆ, ಶಿೃಂಗೇರಿ ಹಾಗೂ ಚಿಕ್ಕಮಗಳೂರಿನ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ.

ಇನ್ನು ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆ, ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ತುಂತುರು ಮಳೆ ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು