ಮಂಗಳೂರು

ಅರಸಿನಮಕ್ಕಿ ಉದಯಶಂಕರ ಕೆ. ಇವರಿಗೆ ಈ ವರ್ಷದ “ಉಂಡೆಮನೆ” ಪ್ರಶಸ್ತಿ

ಬೆಳ್ತಂಗಡಿ : ವೃತ್ತಿಯಲ್ಲಿ ಬೆಳ್ತಂಗಡಿಯಲ್ಲಿ ಜೀವವಿಮಾ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ, ಪ್ರವೃತ್ತಿಯಲ್ಲಿ ಸಮಾಜಸೇವಕನಾಗಿ ಕೆಲಸ ಮಾಡುತ್ತಿರುವ ಅರಸಿನಮಕ್ಕಿ ಸಮೀಪದ ಉದಯಶಂಕರ ಕೆ. ಇವರಿಗೆ ಈ ವರ್ಷದ “ಉಂಡೆಮನೆ” ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಬಾಲ್ಯದಲ್ಲಿ ತಂದೆಯನ್ನು ಕಳಕೊಂಡರೂ ತಾಯಿಯ ರಕ್ಷಣೆ- ಮಾರ್ಗದರ್ಶನಗಳಲ್ಲಿ ಹತ್ತನೆಯ ತರಗತಿಯಲ್ಲಿರುವಾಗಲೇ ರಾ.ಸ್ವ.ಸಂಘದ ಸಂಪರ್ಕದಿಂದ ಸಮಾಜಸೇವೆಗಿಳಿದ ಇವರು ವಿವಿಧ ಧಾರ್ಮಿಕ, ಸಾಮಾಜಿಕ,ಶೈಕ್ಷಣಿಕ, ಸಾಂಸ್ಕೃತಿಕ ಸೇವಾಚಟುವಟಿಕೆಗಳಲ್ಲಿ ವೈಯಕ್ತಿಕವಾಗಿ ಹಾಗೂ ಜೇಸೀ,ರೋಟರಿ ಮುಂತಾದ ಸಂಘ ಸಂಸ್ಥೆಗಳೊಂದಿಗೆ ತನ್ನನ್ನು ಜೋಡಿಸಿಕೊಂಡು ಭಾಗಿಯಾಗುತ್ತಿದ್ದಾರೆ.

ಪರೋಪಕಾರದ ಮೂಲಕವೇ ವೈಯಕ್ತಿಕ ವರ್ಚಸ್ಸನ್ನು ಪಡಕೊಂಡ ಇವರು ಮೂಲ ಕಾರ್ಯಕರ್ತರಿಗೆ ಮಾದರಿಯಾಗಿದ್ದಾರೆ. ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಎಲ್ಲಾ ಸಮಾಜಮುಖೀ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಇವರ ಸರ್ವ ಸೇವೆಗಳನ್ನು ಗುರುತಿಸಿ “ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆ” ಅಂಗವಾಗಿರುವ (26 ನೆಯ ವರ್ಷ) ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದೆಂದು ಯೋಜನೆಯ ಸಂಚಾಲಕ ಉಂಡೆಮನೆ ವಿಶ್ವೇಶ್ವರ ಭಟ್ಟರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾಮೀಜಿಯವರು ಗೋಕರ್ಣ ಸಮೀಪದ ಅಶೋಕೆಯಲ್ಲಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಬರುವ ತಿಂಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿರುವರೆಂದು ತಿಳಿಸಿದ್ದಾರೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago