Categories: ಮಂಗಳೂರು

ಅಳಿಯನಿಂದಲೇ ಅತ್ತೆಯ ಕರಿಮಣಿ ಎಸ್ಕೇಪ್: ಶಾಕ್ ಆದ ಮನೆಯವರು

ಮಂಗಳೂರು ; ಅಳಿಯನೊಬ್ಬ ತನ್ನ ಅತ್ತೆಯ ಕರಿಮಣಿ ಸರಕ್ಕೆ ಕನ್ನ ಹಾಕಿ ಸಿಕ್ಕು ಬಿದ್ದಿದ್ದಾನೆ. ಅಳಿಯನ ಈ ಕೃತ್ಯದಿಂದ ಮನೆಯವರು ಶಾಕ್‌ಗೆ ಒಳಗಾಗಿದ್ದಾರೆ.

ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಮಿತ್ತೊಟ್ಟು ಪ್ರದೇಶದಲ್ಲಿ ಒಂದು ತಿಂಗಳ ಹಿಂದೆ ಒಂಟಿ ಮಹಿಳೆಯ ಮನೆಗೆ ಇಬ್ಬರು ಕಳ್ಳರು ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ ಕರಿಮಣಿ ಸರ ದೋಚಿದ್ದರು. ಸಂತ್ರಸ್ತ ಮಹಿಳೆ ಸುಮತಿ ಆಚಾರ್ಯ ಈ ಬಗ್ಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಹೊರಗಿನವರು ಬಂದು ಕೃತ್ಯ ನಡೆಸಿರೋದು ಅಲ್ಲ, ಯಾರೋ ಪರಿಚಿತರೇ ಕೃತ್ಯ ಎಸಗಿದ್ದಾರೆ ಎಂಬ ಸಂಶಯ ಬಂದಿತ್ತು.

ಈ ಸಂದರ್ಭ ಸ್ಥಳೀಯ ಸಿ.ಸಿ. ಕ್ಯಾಮರಾವೊಂದರಲ್ಲಿ ಕೃತ್ಯ ಎಸಗಿ ಇಬ್ಬರು ಪರಾರಿಯಾಗಿರುವುದು ರೆಕಾರ್ಡ್ ಆಗಿತ್ತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದಾಗ ಮಹಿಳೆಯ ಅಳಿಯನೇ ಈ ಕಳ್ಳತನ ಕೃತ್ಯ ನಡೆಸಿರುವುದು ಎಂದು ಕಂಡು ಬಂತು. ಸದ್ಯ ಮಹಿಳೆಯ ಅಳಿಯ ವಿನಯ್ ಕುಮಾರ್ ಹಾಗೂ ಕಳ್ಳತನದಲ್ಲಿ ಆತನ ಜೊತೆಗಿದ್ದ ಮಣಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿನಯ್ ಕುಮಾರ್ ಸುರತ್ಕಲ್‌ನ ಕೃಷ್ಣಾಪುರ ಸಮೀಪ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ. ಕೌಟುಂಬಿಕ ಜಗಳ ಇದ್ದ ಹಿನ್ನೆಲೆಯಲ್ಲಿ ಈ ಕೃತ್ಯವನ್ನು ಅಳಿಯ ಎಸಗಿದ್ದಾನೆ ಎಂದು ತನಿಖೆ ಸಂದರ್ಭ ತಿಳಿದು ಬಂದಿದೆ.

ಸದ್ಯ ಇಬ್ಬರು ಆರೋಪಿಗಳಿಂದ 60 ಸಾವಿರ ಮೌಲ್ಯದ 32 ಗ್ರಾಂ ತೂಕದ ಕರಿಮಣಿ ಸರ, ಕೃತ್ಯಕ್ಕೆ ಬಳಸಿದ ಸ್ಕೂಟರ್‌ನ್ನು ವಶಪಡಿಸಿಕೊಳ್ಳಲಾಗಿದೆ. ಅಳಿಯ ಈ ಕೃತ್ಯ ಎಸಗುತ್ತಾನೆ ಎಂದು ಕನಸು ಮನಸ್ಸಿನಲ್ಲೂ ಯೋಚಿಸದ ಅತ್ತೆಗೆ ಈ ದರೋಡೆ ಘಟನೆಯಿಂದಾಗಿ ಶಾಕ್ ಆಗಿದೆ. ಮನೆಯಲ್ಲಿ ಎಲ್ಲರೂ ಇರುವ ಸಂದರ್ಭದಲ್ಲಿ ಅತ್ತೆಯೊಂದಿಗೆ ಸುಭಗನಂತೆ ಫೋಸ್ ಕೊಡುತ್ತಿದ್ದ ಈ ಖತರ್ನಾಕ್ ಅಳಿಯ ಮನೆಯಲ್ಲಿ ಅತ್ತೆಯೊಬ್ಬರೇ ಇರುವುದನ್ನು ಖಾತರಿಪಡಿಸಿಕೊಂಡು ದುಷ್ಕೃತ್ಯಕ್ಕೆ ಕೈ ಹಾಕಿದ್ದಾನೆ.

ಸದ್ಯ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Sampriya YK

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago