News Karnataka Kannada
Monday, April 29 2024
ಮಂಗಳೂರು

ಅ.4ರಂದು ‘ಅಂತ್ಯೋದಯ’ ಜನಪ್ರತಿನಿಧಿಗಳಿಗಾಗಿ ರಾಜ್ಯ ಮಟ್ಟದ ಕಾರ್ಯಾಗಾರ

Kota Srinivasa Poojari
Photo Credit :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, “ಅಂತ್ಯೋದಯ” – ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರುಗಳಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಬಗ್ಗೆ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಅ.4ರ ಪೂರ್ವಾಹ್ನ 10 ಗಂಟೆಗೆ ಬಂಟವಾಳದ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಈಗಾಗಲೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆನ್ ಲೈನ್ ಮೂಲಕವೇ ಈ ಕಾರ್ಯಕ್ರಮಕ್ಕೆ ಶುಭಾಶಂಸನೆಗೈಯಲಿದ್ದು, ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆಯ ಸಚಿವರ ಎ.ನಾರಾಯಣ ಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು. ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ ಎಸ್. ಅವರು ಘನ ಉಪಸ್ಥಿತಿ ವಹಿಸುವರು ಎಂದವರು ತಿಳಿಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳ ಶಾಸಕರು ಸೇರಿದಂತೆ 3 ಸಾವಿರ ಜನಪ್ರತಿನಿಧಿಗಳ ಪೈಕಿ ಸುಮಾರು 2500 ಮಂದಿ ಭಾಗವಹಿಸುವರು. ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗಿರುವುದರಿಂದ ಸಭಾಂಗಣದ 4 ವಿಭಾಗಳಲ್ಲಿ ಕಾರ್ಯಕ್ರಮ ಸಜ್ಜುಗೊಳಿಸಲಾಗಿದೆ. ಮುಖ್ಯ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಉಳಿದ ಸಭಾಂಗಣದಲ್ಲಿ ಎಲ್ ಸಿಡಿ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಚುನಾಯಿತ ಪ್ರತಿನಿಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದೆ ಬೆಂಗಳೂರು ಮತ್ತು ದಾವಣಗೆರೆಯಲ್ಲೂ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡು ವಿವಿಧ ಇಲಾಖೆಗಳ ಮಾಹಿತಿ ಒದಗಿಸುವ ಕಾರ್ಯವಾಗಲಿದೆ ಎಂದು ಸಚಿವರು ನುಡಿದರು.

ಬೆಳಗಿನ ಅವಧಿಯಲ್ಲಿ ಸಭಾ ಕಾರ್ಯಕ್ರಮವಿದ್ದು, ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರುಗಳಿಗೆ ಇಲಾಖಾ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಮಧ್ಯಾಹ್ನದ ಅವಧಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ
ಚುನಾಯಿತ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದು ಸಚಿವ ಕೋಟ ವಿವರ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು