ಸಮುದಾಯ

ಆಳ್ವಾಸ್‌ನಲ್ಲಿ ಮೊಳಗಿತು ಸಹಸ್ರಕಂಠ ಗೀತಗಾಯನ!

ಮೂಡುಬಿದಿರೆ: 66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಡೆಯುತ್ತಿರುವ ‘ಕನ್ನಡಕ್ಕಾಗಿ ನಾವು’’ ಅಭಿಯಾನದ ಭಾಗವಾಗಿ ಅಕ್ಟೋಬರ್ 28ರ ಬೆಳಿಗ್ಗೆ 11 ಕ್ಕೆ ಜಗತ್ತಿನಾದ್ಯಂತ 5 ಲಕ್ಷ ಜನರಿಂದ ಏಕಕಾಲದಲ್ಲಿ ಸಾಮೂಹಿಕ ಲಕ್ಷಕಂಠ ಗೀತಗಾಯನ ನಡೆಯಿತು. ಈ ಅಭಿಯಾನದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವೂ ಕೈಜೋಡಿಸಿ, ಇದರ ಯಶಸ್ಸಿನಲ್ಲಿ ಭಾಗಿಯಾಯಿತು. ಪುತ್ತಿಗೆ, ಮಿಜಾರು, ವಿದ್ಯಾಗಿರಿ ಹಾಗೂ ನುಡಿಸಿರಿ ವೇದಿಕೆಯಲ್ಲಿ 5000ಕ್ಕೂ ಅಧಿಕ ವಿದ್ಯಾರ್ಥಿಗಳು ಗೀತಗಾಯನದಲ್ಲಿ ತಮ್ಮ ಕಂಠ ಜೋಡಿಸಿದರು.

4 ಪ್ರತ್ಯೇಕ ಸ್ಥಳಗಳಲ್ಲಿ ನೆರೆದಿದ್ದ ವಿದ್ಯಾರ್ಥಿಗಳಿಂದ, ಕೆ. ವಿ. ರಮಣ್ ಅವರ ನಿರ್ದೇಶನದಲ್ಲಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ನಿಸಾರ್ ಅಹ್ಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳು ಏಕಕಾಲದಲ್ಲಿ ಮೊಳಗಿತು. ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಎಲ್ಲಾ ವಿದ್ಯಾರ್ಥಿಗಳು ಕನ್ನಡ ಬಾವುಟವನ್ನು ಬೀಸುವ ಮೂಲಕ, ತಮ್ಮ ಕನ್ನಡದ ಅಭಿಮಾನವನ್ನು, ಕನ್ನಡ ನಾಡಿನ ಮೇಲಿರುವ ಪ್ರೀತಿಯನ್ನು ತೋರ್ಪಡಿಸಿದರು.

ಈ ಸಂದರ್ಭ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು, “ಕನ್ನಡನಾಡಿನ ಜವಾಬ್ದಾರಿಯುತ ಪ್ರಜೆಗಳಾಗಿ ನಾವು ಕನ್ನಡದಲ್ಲೇ ಮಾತನಾಡುತ್ತೇವೆ, ಕನ್ನಡದಲ್ಲೇ ಬರೆಯುತ್ತೇವೆ, ಕನ್ನಡದಲ್ಲೇ ನಿತ್ಯ ವ್ಯವಹಾರ ಮಾಡುವುದಾಗಿ ಪಣತೊಡುತ್ತೇವೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧರಾಗಿರುತ್ತೇವೆ” ಎಂದು ಸಂಕಲ್ಪ ಮಾಡಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ನಿಖಾಯದ ಡೀನ್ ವೇಣುಗೋಪಾಲ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Sneha Gowda

Recent Posts

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

3 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

24 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

47 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago