ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪಶ್ಚಿಮ ದಿಕ್ಕಿನತ್ತ ಸಾಗುತ್ತಿದ್ದು, ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆ ಇದೆ.
ಭಾನುವಾರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ, ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಒಂದೆರಡು ಕಡೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.