ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಅನುಗ್ರಹ ಶಾಲೆಯ ಬಳಿ ಸೋಮವಾರ ಪಿಕಪ್ ವಾಹನವೊಂದು ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ.
ಉಜಿರೆಯಿಂದ ನೆರಿಯ ಕಡೆ ಸಾಗುತ್ತಿದ್ದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಮಗುಚಿ ಬಿದ್ದಿತು. ವಾಹನದಲ್ಲಿ ಒಟ್ಟು ಮೂವರಿದ್ದು ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಕಳೆದ ಕೆಲವು ದಿನಗಳಿಂದ ಅಗಲಕಿರಿದಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಜಿರೆಯಿಂದ ಚಾರ್ಮಾಡಿ ತನಕ ಅಲ್ಲಲ್ಲಿ ಅಪಘಾತಗಳು ಸಂಭವಿಸುತ್ತಿವೆ.