ಮಂಗಳೂರು

ಉಜಿರೆ: ಯಕ್ಷೋತ್ಸವ-2021 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿ.ಹರ್ಷೇಂದ್ರ ಕುಮಾರ್

ಬೆಳ್ತಂಗಡಿ: ಕಲಾವಿದನನ್ನು ಅಭಿಮಾನಿಗಳೇ ಗುರುತಿಸಿ ಗೌರವಿಸುವುದು ಉತ್ತಮ ಚಿಂತನೆ. ಯಕ್ಷಗಾನ ಸಹಿತ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಶಿಸ್ತು ಪ್ರಮುಖ ಪಾತ್ರ ವಹಿಸುತ್ತದೆ. ಶಿಸ್ತಿನಿಂದ ನಡೆಯುವ ಕಾರ್ಯಕ್ರಮಗಳು ಅಭಿಮಾನಿಗಳನ್ನು ಆಕರ್ಷಿಸುತ್ತವೆ. ಬದ್ಧತೆಯುಳ್ಳ ಕಲಾವಿದರು ಭವಿಷ್ಯದಲ್ಲಿ ಮಿಂಚಲು ಸಾಧ್ಯ ಎಂದು ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಹೇಳಿದರು.

ಅವರು ಮಂಗಳವಾರ ಉಜಿರೆಯಲ್ಲಿ ಯಕ್ಷೋತ್ಸವ-2021 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಶ್ರಯದಲ್ಲಿ ಯಕ್ಷಜನ ಸಭಾ ನೇತೃತ್ವದಲ್ಲಿ,ಬೆಳ್ತಂಗಡಿ ರೋಟರಿಕ್ಲಬ್ ಸಹಯೋಗದಲ್ಲಿ ಡಿ.30ರವರೆಗೆ ಯಕ್ಷಗಾನ ಕಾರ್ಯಕ್ರಮ ಜರಗಲಿದೆ.

ಕರ್ನಾಟಕ ಲೋಕಸೇವಾ ಆಯೋಗದ ನಿವೃತ್ತ ಅಧ್ಯಕ್ಷ ಟಿ.ಶ್ಯಾಮ್ ಭಟ್,ಕ.ಸಾ.ಪ. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಉಪಸ್ಥಿತರಿದ್ದರು. ಯಕ್ಷಜನಸಭಾದ ಗೌರವಾಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಸ್ವಾಗತಿಸಿದರು. ಅಧ್ಯಕ್ಷ ಡಾ.ಎಂ.ಎಂ.ದಯಾಕರ್ ವಂದಿಸಿದರು. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.

ಯಕ್ಷ ಜನಾರ್ದನ ಪ್ರಶಸ್ತಿ

ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರರಾವ್ ಅವರಿಗೆ ಯಕ್ಷ ಜನಾರ್ದನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ಪ್ರಶಸ್ತಿಗಳ ಹಿಂದೆ ಪ್ರೇಕ್ಷಕರ ಪ್ರೀತಿ ಗೌರವ ಇದೆ. ಅವರ ವಿಶ್ವಾಸಕ್ಕೆ ತಕ್ಕಂತೆ ನಿರ್ವಂಚನೆಯಿಂದ ಮನರಂಜನೆ ನೀಡುವುದು ಕಲಾವಿದರ ಕರ್ತವ್ಯ ಎಂದು ಹೇಳಿದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago