ಮಂಗಳೂರು

ಉಡುಪಿ-ಕಾಸರಗೋಡು ೪೦೦ ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ಪ್ರತಿಭಟನೆ

ಬಂಟ್ವಾಳ : ಉಡುಪಿ – ಕಾಸರಗೋಡು ೪೦೦ ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗವಿರೋಧಿಸಿ ಹೋರಾಟ ಸಮಿತಿ ಆಶ್ರಯದಲ್ಲಿ ೪೦೦ ವಿದ್ಯುತ್ ಪ್ರಸರಣ ತಂತಿ ಅಳವಡಿಸುವ ಯೋಜನೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನಾ ಧರಣಿ ಬಂಟ್ವಾಳದ ಜಕ್ರಿಬೆಟ್ಟು ಜಂಕ್ಷನ್‌ನಲ್ಲಿ ಮಂಗಳವಾರ ನಡೆಯಿತು.

ಹೋರಾಟ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ದ.ಕ. ಜಿಲ್ಲೆಯ ರೈತರು ಸಣ್ಣ ಹಿಡುವಳಿದಾರರು. ಅಡಿಕೆ, ತೆಂಗು, ಬಾಳೆ ಹೀಗೆ ಲಾಭದಾಯಕ ಕೃಷಿ ಮಾಡುತ್ತಾರೆ. ಅಂತಹ ಕೃಷಿ ಭೂಮಿಯಲ್ಲಿ ವಿದ್ಯುತ್ ಮಾರ್ಗ ಹಾದು ಹೋದರೆ ಜನರ ಬದುಕೇ ನಾಶವಾದಂತೆ ಎಂದರು. ಈ ಯೋಜನೆಯಿಂದ ಮನುಷ್ಯರು ಮಾತ್ರವಲ್ಲದೆ ಸಕಲ ಜೀವ ರಾಶಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ನಾವು ವೈಜ್ಞಾನಿಕವಾಗಿ ಚಿಂತಿಸ ಬೇಕಾಗಿದೆ. ನಮ್ಮ ಹೋರಾಟ ಒಂದು ದಿನಕ್ಕೆ ಸೀಮಿತವಾಗದೆ, ನಿರಂತರ ಹೋರಾಟ ನಡೆಯಬೇಕಾಗಿದೆ ಎಂದು ಅವರು.

ರೈತರಿಗೆ ಪರಿಹಾರ ಮುಖ್ಯವಲ್ಲ, ಪರ್ಯಾಯ ವ್ಯವಸ್ಥೆ ಬೇಕಾಗಿದೆ. ಇಂದನ ಸಚಿವರು ನಮ್ಮ ಜಿಲ್ಲೆಯವರೇ ಆಗಿರುವುದರಿಂದ ಈ ಯೋಜನೆಯನ್ನು ಒಂದೇ ದಿನದಲ್ಲಿ ರದ್ದುಗೊಳಿಸಲು ಸಾಧ್ಯವಿದೆ ಎಂದು ತಿಳಿಸಿದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ ನಾವು ಅಭಿವೃದ್ಧಿಯ ವಿರೋಧಿಗಳಲ್ಲ, ಆದರೆ ರೈತರಿಗೆ ಅನ್ಯಾಯವಾದರೆ ಸಹಿಸುವವರು ಅಲ್ಲ ಎಂದರು. ವಿದ್ಯುತ್ ಮಾರ್ಗ ಅಳವಡಿಸಲು ಗೂಗಲ್‌ನಲ್ಲಿ ಸರ್ವೆ ಮಾಡುವವರಿಗೆ ಪರಿಸರ, ಕೃಷಿ, ಜೀವ ವೈವಿಧ್ಯ, ಅರಣ್ಯಕ್ಕೆ ತೊಂದರೆ ಆಗದಂತೆ ಯೋಜನೆ ರೂಪಿಸಲು ಗೂಗಲ್‌ನಲ್ಲಿ ಸಾಧ್ಯವಾಗಿಲ್ಲವೇ ಎಂದು ಪ್ರಶ್ನಿಸಿದ ಅವರು ನಮಗೆ ಬದುಕು ಮುಖ್ಯ, ಬದುಕಿಗಾಗಿ ಹೋರಾಟ ಅನಿವಾರ್ಯ ಎಂದು ತಿಳಿಸಿದರು.

ಸಂತ್ರಸ್ತೆ ಕಾನ್ಸೆಪ್ಟ ಡೇಸಾ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್ ರೊಡ್ರಿಗಸ್ ಮಾತನಾಡಿದರು. ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ಎಂ.ಎಸ್. ಮಹಮ್ಮದ್, ಪದ್ಮಶೇಖರ್ ಜೈನ್, ಸುದರ್ಶನ್ ಜೈನ್, ವೀಣಾಭಟ್, ರಾಯ್ ಕಾರ್ಲೋ, ಮಹಮದ್ ಶಫಿ, ಲುಕ್‌ಮಾನ್, ಚಿತ್ತರಂಜನ್ ಶೆಟ್ಟಿ, ರೋಷನ್ ರೈ, ಮೋಹನ್ ಗೌಡ ಕಲ್ಮಂಜ, ಶೇಖರ್ ಬಿ, ರಾಮಣ್ಣ ವಿಟ್ಲ, ಪ್ರಭಾಕರ ದೈವಗುಡ್ಡೆ ಪರಮೇಶ್ವರ ಮೂಲ್ಯ, ವಾಸು ಪೂಜಾರಿ, ಲವಿನಾ ವಿಲ್ಮಾ ಮೋರಸ್, ಪದ್ಮನಾಭ ರೈ, ಪ್ರಕಾಶ್ ಶೆಟ್ಟಿ, ಜಗದೀಶ್ ಕೊಯಿಲಾ, ಪ್ರಶಾಂತ್ ಕುಲಾಲ್, ಸುರೇಶ್ ಜೋರಾ, ಯೂಸುಫ್ ಕರಂದಾಡಿ, ಆನಂದ ಸಾಲ್ಯಾನ್, ಅಬ್ಬಾಸ್ ಅಲಿ, ಜನಾರ್ದನ ಚೆಂಡ್ತಿಮಾರ್, ರಮೇಶ್ ನಾಯಕ್, ವೆಂಕಪ್ಪ ಪೂಜಾರಿ, ಪ್ರೇಮನಾಥ ಶೆಟ್ಟಿ, ಹಸೈನಾರ್, ಮಧುಸೂದನ್ ಶೆಣೈ, ಐಡಾ ಸುರೇಶ್, ಪ್ಲೋಸಿ ಡಿಸೋಜಾ, ಬೆನೆಡಿಕ್ಟ್ ಕಾರ್ಲೋ, ಸೀತಾರಾಮ ಶೆಟ್ಟಿ, ನವಾಝ್ ಬಂಟ್ವಾಳ, ಇಬ್ರಾಹಿಂ ನಾವಾಝ್, ಶರೀಫ್ ಪರ್ಲ್ಯ, ಲೋಕೇಶ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಸುರೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕಿಂತ ಪೂರ್ವಭಾವಿಯಾಗಿ ಬೈಕ್ ರ್‍ಯಾಲಿ ನಡೆಯಿತು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago