Categories: ಮಂಗಳೂರು

ಉಪ್ಪಿನಂಗಡಿಯಲ್ಲಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ

ಮಂಗಳೂರು :  ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮಂಗಳವಾರ ನಡೆದ ಪ್ರತಿಭಟನೆಯ ಸಂದರ್ಭ ನಡೆದ ಸಾರ್ವಜನಿಕ ಶಾಂತಿ ಭಂಗ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಕೊಲೆ ಯತ್ನ ಮತ್ತಿತರ ಪ್ರಕರಣಕ್ಕೆ ಸಂಬಂಧಿಸಿ 3ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು ಅದರಲ್ಲಿ 1ಪ್ರಕರಣಕ್ಕೆ ಸಂಬಂಧಿಸಿ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಓಮನಾ ದೂರು ನೀಡಿದ್ದು ಪಿಎಫ್ಐ ಸಂಘಟನೆಯ ಮುಖಂಡರಾದ ಜಕಾರಿಯಾ ಮುಸ್ತಫಾ ಅವರನ್ನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಆರೋಪಿತರು ಏಕಾಏಕಿಯಾಗಿ ಯಾವುದೇ ಅನುಮತಿ ಪಡೆಯದೆ ಅಕ್ರಮ ಕೂಟ ಸೇರಿ ಕೊಂಡು ಪೊಲೀಸ್ ಠಾಣೆ ಮುಂಭಾಗ ಸಾರ್ವಜನಿಕರ ಸ್ಥಳದಲ್ಲಿ ಗುಂಪು ಕಟ್ಟಿಕೊಂಡು ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತ ಸಂಜೆ 6ಗಂಟೆ ಸುಮಾರಿಗೆ ಆರೋಪಿಗಳು ಠಾಣೆಗೆ ಪ್ರವೇಶಿಸಲು ಪ್ರಯತ್ನಿಸಿದ್ದು ಈ ಸಂದರ್ಭ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತಳ್ಳಿ ಅವರ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿದ್ದಲ್ಲದೆ ಯಾವುದೇ ಮಾಸ್ಕ್ ಧರಿಸದೇ ರಾಜ್ಯ ಸರಕಾರ ಹೊರಡಿಸಿದ ಕೋರ್ಟ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Sneha Gowda

Recent Posts

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

2 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

12 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

18 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

33 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

43 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

58 mins ago