ಮಂಗಳೂರು : ಉಪ್ಪಿನಂಗಡಿ ಕೆಮ್ಮಾರ ನದಿಯಲ್ಲಿ ಯುವಕನೊಬ್ಬ ನೀರುಪಾಲು. ಪಶ್ಚಿಮ ಘಟ್ಟದಲ್ಲಿ ಮಳೆ ಸುರಿಯುತ್ತಿದ್ದು, ನದಿಯಲ್ಲಿ ನೀರಿನ ಹರಿವು ಹೆಚ್ಚಳ ಇದ್ದರೂ ಕೂಡ ನದಿಗೆ ಇಳಿದಿದ್ದ ಈ ಯುವಕ. ಸ್ಥಳೀಯ ನಿವಾಸಿ ಇಸ್ಮಾಯಿಲ್ ಎಂಬವರ ಮಗ ನಿವಾಸಿ ಶಫೀಕ್(19)ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಸ್ಥಳೀಯ ಈಜುಗಾರರರಿಂದ, ಶಫೀಕ್ ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.