ಮಂಗಳೂರು

ಉರ್ವ ಹೆಡ್‌ಕಾನ್‌ಸ್ಟೇಬಲ್ ಸಿದ್ಧಾರ್ಥ್ ನಿಧನ

ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ಧಾರ್ಥ್ ಜೆ. (41) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ನಿಧನರಾದರು.

ಮೃತರು ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿದ್ದು, ನಗರದ ಪೊಲೀಸ್ ಕ್ವಾರ್ಟ್ರಸ್‌ನಲ್ಲಿ ವಾಸವಿದ್ದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ಸಿದ್ಧಾರ್ಥ್ ಅವರಲ್ಲಿ ಅನಾರೋಗ್ಯ ಕಂಡುಬಂದಿತ್ತು. ಸಹೋದ್ಯೋಗಿಗಳು ಮನೆಗೆ ಹೋಗಲು ಹೇಳಿದ್ದರು. ನಂತರ ಮನೆಗೆ ತೆರಳಿದ್ದ ಸಿದ್ಧಾರ್ಥ್ ಶನಿವಾರ ನಸುಕಿನಜಾವ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉರ್ವ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿದ್ದ ಸಿದ್ಧಾರ್ಥ್ ಈ ಮೊದಲು ಮಂಗಳೂರು ದಕ್ಷಿಣ (ಪಾಂಡೇಶ್ವರ), ಸಂಚಾರ ಠಾಣೆ ಸಹಿತ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿದ್ದರು.

Raksha Deshpande

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

16 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

32 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

47 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago