Categories: ಮಂಗಳೂರು

ಉಳಿ ಗ್ರಾಮ ಪಂಚಾಯತ್: ತಹಶೀಲ್ದಾರರ ಗ್ರಾಮ ವಾಸ್ತವ್ಯ

 ಬಂಟ್ವಾಳ: ಸರಕಾರದ ಮಹತ್ತರ ಯೋಜನೆಯಾದ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉಳಿ ಗ್ರಾ.ಪಂ.ನ ಕಕ್ಯಪದವು ಸುವರ್ಣ ಸಭಾಭವನದಲ್ಲಿ ಶನಿವಾರ ನಡೆಯಿತು.

ಕಾರ್ಯಕ್ರಮವನ್ನು   ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರು, ಗ್ರಾಮೀಣ ಭಾಗದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪ್ರತೀ ತಿಂಗಳ ಮೂರನೇ ಶನಿವಾರ ನಡೆಸಲಾಗುತ್ತಿದೆ.ಈ ಸಂದರ್ಭದಲ್ಲಿ ಎಲ್ಲ ತಾಲೂಕು ಮಟ್ಟದ ಅಽಕಾರಿಗಳು ಗ್ರಾಮಗಳಿಗೆ ತೆರಳುವುದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಿದ್ದಲ್ಲಿ ಸ್ಥಳದಲ್ಲೇ ಪರಿಹರಿಸಲು ಸಾಧ್ಯವಾಗುತ್ತದೆ.ಸಾರ್ವಜನಿಕರು ಇಲಾಖೆಗಳಿಗೆ ಅಲೆದಾಡುವುದು ತಪ್ಪುತ್ತದೆ ಎಂದು ಹೇಳಿದರು.

ಸರಕಾರಿ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ಇದ್ದಲ್ಲಿ ಗ್ರಾಮ ಪಂಚಾಯತ್ ಹೆಸರಿಗೆ ಕಾದಿರಿಸಬೇಕು ಎಂದು ಹೇಳಿದರು.
ಉಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಮೈರ, ಉಪಾಧ್ಯಕ್ಷ ಚಿದಾನಂದ ರೈ,  ಭೂನ್ಯಾಯ ಮಂಡಳಿ ಸದಸ್ಯ ರಂಜಿತ್ ಮೈರ, ಕ್ಷೇತ್ರ ಶಿಕ್ಷಣಾಽಕಾರಿ ಜ್ಞಾನೇಶ್, ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು, ಪಂಚಾಯತ ಅಭಿವೃದ್ಧಿ ಅಽಕಾರಿ ಧನಂಜಯ, ಪ್ರಥಮ ದರ್ಜೆ ಸಹಾಯಕಿ ಗ್ರೆಟ್ಟಾ ಮಸ್ಕರೇನ್ಹಸ್, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಽಕಾರಿ ನಿಶ್ಮಿತಾ,ಉಳಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಉಪತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು. ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಾಯಿತು.

Sneha Gowda

Recent Posts

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

22 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

33 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

49 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

1 hour ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago