ಮಂಗಳೂರು

ಎನ್‌ಐಟಿಕೆಯ  ಕೃಷ್ಣ ಪ್ರಭು ಸಹಿತ ನಾಲ್ವರಿಗೆ ಜಗತ್ತಿನ ಶ್ರೇಷ್ಠ ವಿಜ್ಞಾನಿ ಸ್ಥಾನಮಾನ

ಸುರತ್ಕಲ್ : ಸುರತ್ಕಲ್‌ನ ಎನ್‌ಐಟಿಕೆಯ  ಕೃಷ್ಣ ಪ್ರಭು ಸಹಿತ ನಾಲ್ವರು ಸೇರಿದಂತೆ ಕರ್ನಾಟಕದ ೧೨೪ ಮಂದಿ ವಿಜ್ಞಾನಿಗಳು ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಅಮೆರಿಕಾದ ಪ್ರತಿಷ್ಟಿತ ಸ್ಟಾನ್ ಫೋರ್ಡ್  ಯುನಿವರ್ಸಿಟಿಯ ವಿಜ್ಞಾನಿಗಳು ತಯಾರಿಸಿರುವ ಜಗತ್ತಿನ  ಪ್ರಮುಖ  ೨% ವಿಜ್ಞಾನಿಗಳ  ಪಟ್ಟಿಯಲ್ಲಿ ಆಪ್ಟೋ ಎಲೆಕ್ಟ್ರಾನಿಕ್ ಮತ್ತು ಟೆಲಿ ಕಮ್ಯುನಿಕೇಷನ್ ಕ್ಷೇತ್ರದಲ್ಲಿ ನಡೆಸಿದ್ದ ಸಂಶೋಧನೆಗಳಿಗಾಗಿ ೨೦೧೯ ಮತ್ತು ೨೦೨೦ ರಲ್ಲಿ  ನಿರಂತರವಾಗಿ   ಎನ್ ಐಟಿಕೆಯ ಪ್ರೊಫೆಸರ್    ಪ್ರಭು ಕೃಷ್ಣನ್  ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಅಮೆರಿಕದ ಸ್ಟ್ಯಾಂಡ್‌ಫೋರ್ಡ್    ಯೂನಿವರ್ಸಿಟಿಯ ವಿಜ್ಞಾನಿಗಳು ಈ ಪಟ್ಟಿಯನ್ನು ಸಿದ್ಧಪಡಿಸಿದ್ದು,  ಇದು ಪ್ಲಾಸ್‌ಬಯೋಲಜಿ ಎಂಬ ಪ್ರತಿಷ್ಠಿತ ಮ್ಯಾಗಸಿನ್‌ನಲ್ಲಿ ಪ್ರಕಟವಾಗಿದೆ. ಜಗತ್ತಿನಾದ್ಯಂತ ಸರ್ವೇ ಮಾಡಿ ವಿವಿಧ ಮಾನದಂಡಗಳಡಿಯಲ್ಲಿ ಒಟ್ಟು ೧,೪೯೪ ಮಂದಿಯನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ.
ಸುರತ್ಕಲ್ ಎನ್‌ಐಟಿಕೆಯ ಒಪ್ಟೋಎಲೆಕ್ಟ್ರಾನಿಕ್, ಕಮ್ಯೂನಿಕೇಷನ್‌ನ ಕೃಷ್ಣ ಪ್ರಭು, ಮೆಕ್ಯಾನಿಕಲ್ ಎಂಜಿನಿಯರಿಂಗ್‌ನ ಪಿ. ಜಯರಾಜ್ ಮತ್ತು ಎಸ್. ಸಿ. ಕಟ್ಟಿಮನಿ ಹಾಗೂ  ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನ ಜೆನಾ ದೇಬಾಶೀಶಾ ಅವರು ಈ ಪಟ್ಟಿಯಲ್ಲಿ ಹೆಸರು ಪಡೆದುಕೊಂಡಿರುವುದು ಜಿಲ್ಲೆಗೆ ದೊಡ್ಡ ಹೆಮ್ಮೆಯ ಸಂಗತಿಯಾಗಿದೆ. ತಾವು ಈಚೆಗೆ ಬರೆದಿರುವ ಕೆಲವು ಸಂಶೋಧನ ಲೇಖನಗಳ ಆಧಾರದಲ್ಲಿ ಈ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ.

Swathi MG

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

57 seconds ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

24 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

43 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

59 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago