Categories: ಮಂಗಳೂರು

ಎಮ್ಮೆಕೆರೆ ರಾಹುಲ್ ಕಕ್ಕೆ ಕೊಲೆ ಪ್ರಕರಣ: ಆರು ಆರೋಪಿಗಳು ಬಂಧನ

ಮಂಗಳೂರು: ಎಮ್ಮೆಕೆರೆಯಲ್ಲಿ ನಡೆದಿದ್ದ ರಾಹುಲ್ ಕಕ್ಕೆ ಕೊಲೆ ಪ್ರಕರಣದ ಆರು ಆರೋಪಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಮಹೇಂದ್ರ ಶೆಟ್ಟಿ(27), ಅಕ್ಷಯ್ ಕುಮಾರ್(25), ಸುಶಿತ್(20), ಧಿಲ್ಲೇಶ್ ಬಂಗೇರ (20)ಎನ್ನುವವರು ಪ್ರಮುಖ ಆರೋಪಿಗಳಾಗಿದ್ದು, ಕೃತ್ಯಕ್ಕೆ ಸಹಕರಿಸಿದ ಶುಭಂ (26) ಮತ್ತು ವಿಷ್ಣು(20) ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಎಲ್ಲಾ ಆರೋಪಿಗಳು ಮಂಗಳೂರಿನವರೆ ಆಗಿದ್ದಾರೆ. ಬಂಧಿತರಿಂದ ತಲವಾರುಗಳು, ಕತ್ತಿ ಮತ್ತು ಮಾರಕಾಯುಧಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದುವರೆಗಿನ ತನಿಖೆಯಲ್ಲಿ ಪ್ರಕರಣದಲ್ಲಿ ಒಟ್ಟು 13 ಮಂದಿ ಭಾಗಿಯಾಗಿರುವುದಾಗಿ ತಿಳಿದು ಬಂದಿದ್ದು, ಆ ಪೈಕಿ 8 ಮಂದಿ ಅಪರಾಧ ಹಿನ್ನಲೆಯುಳ್ಳವರಾಗಿದ್ದರೆ. ಬಂಧಿತ ಸುಶೀತ್ ಮೇಲೆ ಒಂದು ಕೊಲೆ ಯತ್ನ ಪ್ರಕರಣ , ಅಕ್ಷಯ್ ಕುಮಾರ್ ಮೇಲೆ ಹಲ್ಲೆ ಪ್ರಕರಣ ಈಗಾಗಲೇ ದಾಖಲಾಗಿತ್ತು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಎಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆ ಬಜಾರ್ ನನ್ನು ಹತ್ಯೆಗೈಯಲಾಗಿತ್ತು. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

Gayathri SG

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

4 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

16 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

25 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

36 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

55 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago