News Karnataka Kannada
Monday, April 29 2024
ಮಂಗಳೂರು

ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಗತ್ಯ ನೆರವು: ಡಾ.ಎಂ.ಎನ್.ರಾಜೇಂದ್ರಕುಮಾರ್

Manglore
Photo Credit : News Kannada

ಮಂಗಳೂರು: ಪತ್ರಕರ್ತರ ಹಿತದೃಷ್ಟಿಯಿಂದ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿರುವುದು ಉತ್ತಮ ಬೆಳವಣಿಗೆ. ಸೊಸೈಟಿಯ ಮೂಲಕ ಉತ್ತಮ ಕೆಲಸಗಳಾಗಬೇಕು. ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಸೋಮವಾರ ಮಂಗಳೂರು ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಷೇರು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸೊಸೈಟಿಯ ಷೇರುದಾರರಿಗೆ ಷೇರು ಪತ್ರ ವಿತರಿಸಿ ಅವರು ಮಾತನಾಡಿದರು.

ಪತ್ರಕರ್ತರು ತಮ್ಮ ವೃತ್ತಿಯೊಂದಿಗೆ ಶಕ್ತಿಯಾಗಿ ಬೆಳೆಯಬೇಕು. ಸಮಾಜಕ್ಕೆ ಪೂರಕವಾದ ಕೆಲಸಗಳನ್ನು ಮಾಡಬೇಕು. ಗೃಹ ನಿರ್ಮಾಣ ಸೊಸೈಟಿಯ ಮೂಲಕ ಪತ್ರಕರ್ತರ ಮನೆ ನಿರ್ಮಾಣದ ಕನಸು ಈಡೇರಲಿ. ತಮ್ಮ ಬ್ಯಾಂಕ್ ಅಗತ್ಯ ನೆರವನ್ನು ನೀಡಲು ಬದ್ಧವಾಗಿದೆ ಎಂದು ರಾಜೇಂದ್ರ ಕುಮಾರ್ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕುಟುಂಬಕ್ಕೆ ಪತ್ರಕರ್ತರು ಸೇರ್ಪಡೆಗೊಳ್ಳುತ್ತಿರುವುದು ಸಂತಸದ ವಿಷಯ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡಂತೆ ಒಟ್ಟು ೧೫೦೦ ಸಹಕಾರಿ ಸಂಸ್ಥೆಗಳಿದ್ದು, ಇದೀಗ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘವೂ ಸೇರ್ಪಡೆಯಾಗಿದೆ. ಈ ಸಂಘದ ಮೂಲಕ ಸಾಕಷ್ಟು ಕೆಲಸಗಳನ್ನು ಮಾಡಲು ಅವಕಾಶವಿದ್ದು, ಆ ನಿಟ್ಟಿನಲ್ಲಿ ಕೆಲಸ ಸಾಗಲಿ ಎಂದು ಹಾರೈಸಿದರು.

ಇದೇ ಸಂದರ್ಭ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರನ್ನು ಗೌರವಿಸಲಾಯಿತು.

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಅಭಿಷೇಕ್ ಕೆ ವೇದಿಕೆಯಲ್ಲಿದ್ದರು. ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟವಂದಿಸಿದರು. ನಿರ್ದೇಶಕಿ ಸತ್ಯಾ ಕೆ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು