News Karnataka Kannada
Monday, April 29 2024
ಮಂಗಳೂರು

ಎಸ್​​ಸಿಡಿಸಿಸಿ ಬ್ಯಾಂಕ್ ಆರ್ಥಿಕ ವರ್ಷದಲ್ಲಿ 50.08 ಕೋಟಿ ರೂಪಾಯಿ ಲಾಭ!

Inauguration of administrative office of Federation of Bunts Associations at Mulki on April 5
Photo Credit :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಬ್ಯಾಂಕ್ ಗಳಲ್ಲೇ ಮುಂಚೂಣಿಯಲ್ಲಿರುವ ಎಸ್​​ಸಿಡಿಸಿಸಿ ಬ್ಯಾಂಕ್ ಆರ್ಥಿಕ ವರ್ಷದಲ್ಲಿ 50.08 ಕೋಟಿ ರೂಪಾಯಿ ಲಾಭ ಗಳಿಸಿದ್ದು, ಕಳೆದ ವರ್ಷಕ್ಕಿಂತ ಶೇ.48.82 ಏರಿಕೆ ಕಂಡಿದೆ. ಇದು ಎಸ್ ಸಿಡಿಸಿಸಿ ಬ್ಯಾಂಕ್ ನ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆಯಾಗಿದೆ‌ ಎಂದು ಎಸ್​​ಸಿಡಿಸಿಸಿ ಬ್ಯಾಂಕ್​​ನ ಅಧ್ಯಕ್ಷ ಡಾ. ಎಂ‌.ಎನ್. ರಾಜೇಂದ್ರ ಕುಮಾರ್ ಹರ್ಷ ವ್ಯಕ್ತಪಡಿಸಿದರು.

ನಗರದ ಎಸ್​​ಸಿಡಿಸಿಸಿ ಬ್ಯಾಂಕ್ ನಲ್ಲಿಂದು ಮಾತನಾಡಿದ ಅವರು, ಈ ವರ್ಷ 11,598 ಕೋಟಿ ರೂ. ಒಟ್ಟು ವ್ಯವಹಾರ ದಾಖಲೆ ಮಾಡಿದ್ದು, ಈ ಮೂಲಕ ಕಳೆದ ವರ್ಷದ ವ್ಯವಹಾರಕ್ಕಿಂತ ಶೇಕಡಾ 14.87 ಏರಿಕೆ ಕಂಡಿದೆ. ಈ ಬಾರಿ 2022-23ನೇ ಸಾಲಿಗೆ 14 ಸಾವಿರ ಕೋಟಿ ರೂ. ವ್ಯವಹಾರದ ಗುರಿ ಹೊಂದಿದೆ. ಎಸ್​ಸಿಡಿಸಿಸಿ ಬ್ಯಾಂಕ್, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಠೇವಣಾತಿ ಇಲ್ಲದೆ ತನ್ನ 109 ಶಾಖೆಯಲ್ಲಿ ಒಟ್ಟು 5,649.97 ಕೋಟಿ ರೂ. ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ ಎಂದು ಮಾಹಿತಿ ನೀಡಿದರು.

ಎಸ್​​ಸಿಡಿಸಿಸಿ ಬ್ಯಾಂಕ್ ನಿಂದ ಸಾಲ ಪಡೆದಿರುವ ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಪಡೆದು 2020 ಏಪ್ರಿಲ್ 1 ರಿಂದ 2021ರ ಜೂನ್ 30ರ ಅವಧಿಯಲ್ಲಿ ಕೋವಿಡ್ ನಿಂದ ಮೃತಪಟ್ಟ 174 ರೈತರ ಕುಟುಂಬಕ್ಕೆ 1,52,44,700 ರೂ. ಪರಿಹಾರ ಮೊತ್ತವನ್ನು ನೀಡಲಾಗಿದೆ ಎಂದು ತಿಳಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು