ಮಂಗಳೂರು

ಎಸ್.ಡಿ.ಎಂ ಕಾಲೇಜಿಗೆ ನೂತನ ಪ್ರಾಂಶುಪಾಲರ ನೇಮಕ

ಉಜಿರೆ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಉದಯ ಚಂದ್ರ ನೇಮಕಗೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ. ಸತೀಶ್ಚಂದ್ರ ವಯೋಸಹಜ ನಿವೃತ್ತಿ ಹೊಂದಿದ್ದರಿಂದ ಈ ನೇಮಕಾತಿ ನಡೆಯಿತು. ಕಾಲೇಜಿನ ಸಂಸ್ಥಾಪಕ ಪ್ರಾಂಶುಪಾಲರು ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಪ್ರೊ. ಪ್ರಭಾಕರ್ ರವರು ನಿವೃತ್ತಿ ಹೊಂದಿದ ಪ್ರಾಂಶುಪಾಲರಿಗೆ ಶುಭಕೋರಿ, ನೂತನವಾಗಿ ನೇಮಕವಾದ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರಿಸಿದರು.

ಡಾ. ಉದಯ ಚಂದ್ರಾವರು ತಮ್ಮ ಮೂವತ್ತಾರು ವರ್ಷಗಳ ಸೇವೆಯಲ್ಲಿ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪಿಎಚ್ಡಿ ಮಾರ್ಗದರ್ಶಕರಾಗಿದ್ದು, ಎಂಟು ಸಂಶೋಧನಾ ಲೇಖನಗಳನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದಾರೆ. ಪದವಿ ಮಕ್ಕಳಿಗಾಗಿ ವಾಣಿಜ್ಯ ಶಾಸ್ತ್ರದಲ್ಲಿ ಹನ್ನೆರಡು ಪಠ್ಯ ಪುಸ್ತಕಗಳನ್ನು ಬರೆದಿರುವ ಇವರಿಗೆ ಐ.ಸಿ.ಎಸ್.ಎಸ್.ಆರ್.ಸಂಸ್ಥೆಯ ಮೇಜರ್ ರಿಸರ್ಚ್ ಪ್ರಾಜೆಕ್ಟ್ ಲಭಿಸಿ, ಕಾರ್ಯ
ಪ್ರವೃತ್ತರಾಗಿದ್ದಾರೆ.

ಅಧಿಕಾರ ಸ್ವೀಕರಿಸಿದ ಡಾ. ಉದಯ ಚಂದ್ರ ರವರು ನಿವೃತ್ತರಾದ ಡಾ. ಸತೀಶ್ಚಂದ್ರರವರ ಬಿಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ, ಕಾಲೇಜಿನ ಜವಾಬ್ದಾರಿಯನ್ನು ಸಮರ್ಥವಾಗಿ ಮುನ್ನಡೆಸುವ ಮಾತನಾಡಿದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

33 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

51 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

1 hour ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago