ಮಂಗಳೂರು

ಏಕಲವ್ಯ ಕ್ರೀಡಾ ಪ್ರಶಸ್ತಿ ವಿಜೇತ ಉದಯ ಚೌಟ ನಿಧನ

ಬಂಟ್ವಾಳ : ಏಕಲವ್ಯ ಕ್ರೀಡಾ ಪ್ರಶಸ್ತಿ ವಿಜೇತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಕ್ರೀಡಾಪಟು, ಅಂತರಾಷ್ಟ್ರೀಯ ಒಬ್ಬ ಡರ್ಟಿ ಆಟಗಾರ, ಬ್ಯಾಂಕ್ ಆಫ್ ಬರೋಡಾ ಉದ್ಯೋಗಿ ಉದಯ ಚೌಟ ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ (ಮೇ 21) ನಿಧನರಾದರು.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿಯಾಗಿದ್ದ ಇವರು ಪ್ರಸ್ತುತ ಬ್ಯಾಂಕ್ ಆಫ್ ಬರೋಡಾದ ಸುರತ್ಕಲ್ ಶಾಖೆಯಲ್ಲಿ ಉಪ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ದ.ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷರೂ ಆಗಿದ್ದ ಇವರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. 2007ರ ಕಬಡ್ಡಿ ವಿಶ್ವಕಪ್ ಪಂದ್ಯಾಕೂಟದಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು.
ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಇವರ ಕ್ರೀಡಾ ಸಾಧನೆಗಾಗಿ ಪಡೆದುಕೊಂಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
Ashika S

Recent Posts

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

40 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

56 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago