Categories: ಮಂಗಳೂರು

ಐಕಳ ಹರೀಶ್ ಶೆಟ್ಟಿಯವರಿಗೆ ಮುಲ್ಕಿ ಸುಂದರ ರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿ

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷ, ಸಮಾಜ ಸೇವಕ ಐಕಳ ಹರೀಶ್ ಶೆಟ್ಟಿ ಅವರು ದಿವಂಗತ ಮುಲ್ಕಿ ಸುಂದರ ರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನವಂಬರ್ 7 ರಂದು ಭಾನುವಾರ ಸಂಜೆ 5 ಗಂಟೆಗೆ ಬೆಂಗಳೂರು ಬಂಟರ ಸಂಘದ ಆಶ್ರಯದಲ್ಲಿ ವಿಜಯ ನಗರದಲ್ಲಿರುವ  ಶ್ರೀಮತಿ ರಾಧಾ ಭಾಯಿ ತಿಮ್ಮಪ್ಪ ಭಂಡಾರಿ ಸಭಾ ಭವನದಲ್ಲಿ ದೀಪಾವಳಿ ಸಡಗರ ಕಾರ್ಯಕ್ರಮದಲ್ಲಿ  ಪ್ರಶಸ್ತಿ ಪ್ರಧಾನ ನಡೆಯಲಿದೆ.
ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜೀ ಉಪ ಮುಖ್ಯಮಂತ್ರಿ ಡಾ. ಸಿ.ಎಸ್ ಅಶ್ವಥ್ ನಾರಾಯಣ್, ಸಾಲು ಮರದ ತಿಮ್ಮಕ್ಕ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ದಿ.ಕೆ.ಪಿ ರಾಮಣ್ಣ ಶೆಟ್ಟಿ ಸ್ಮಾರಕ ಶೈಕ್ಷಣಿಕ ಸಾಧಕ  ಪ್ರಶಸ್ತಿಯನ್ನು ಡಾ. ಜಯಕರ ಶೆಟ್ಟಿ ಎಂ, ದಿ. ಡಾ. ಡಿ.ಕೆ ಚೌಟ ಸ್ಮಾರಕ ಸಾಂಸ್ಕೃತಿಕ  ಸಾಧಕ ಪ್ರಶಸ್ತಿಯನ್ನು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಪಡೆಯಲಿದ್ದಾರೆ. ವಿಶೇಷ ಗೌರವಾನ್ವಿತರಾಗಿ ಬಿ. ಜಗನ್ನಾಥ ಶೆಟ್ಟಿ, ಐ.ಎಂ ರಾಜಾರಾಮ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Swathi MG

Recent Posts

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

9 mins ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

3 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago