Categories: ಮಂಗಳೂರು

ಐಸಿಸ್‌ ಉಗ್ರರೊಂದಿಗಿನ ನಂಟು ಆರೋಪ: ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎನ್‌ಐಎ ವಶಕ್ಕೆ

ಮಂಗಳೂರು : ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಪುತ್ರನ ಮನೆಗೆ ಸೋಮವಾರ ಮತ್ತೆ  ರಾಷ್ಟ್ರೀಯ ತನಿಖಾ ದಳದ ತಂಡ  ದಾಳಿ ನಡೆಸಿದೆ. ಮಾಜಿ ಶಾಸಕ ದಿ.ಇದಿನಬ್ಬ ಪುತ್ರ ಬಿ.ಎಂ.ಭಾಷಾ ಸೊಸೆ ದೀಪ್ತಿ ಮಾರ್ಲ ಆಲಿಯಾಸ್ ಮರಿಯಂ ಳನ್ನು ಎನ್ಐಎ ವಶಕ್ಕೆ ಪಡೆದಿದೆ.

ಇಂದು ಬೆಳಿಗ್ಗೆ ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯ ಮನೆಯಲ್ಲಿ ವಶಕ್ಕೆ ಪಡೆದಿದೆ. ಎನ್ಐಎ ತಂಡ ಟೆಂಪೋ ಟ್ರಾವೆಲರ್ ವಾಹನದಲ್ಲಿ ಕರೆದುಕೊಂಡು ಹೋಗಿದೆ. ಮಂಗಳೂರಿನ ವೆನ್ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನಂತರ  ಹೆಚ್ಚಿನ ತನಿಖೆಗೆ ನೇರವಾಗಿ ದೆಹಲಿಗೆ ಕರೆದುಕೊಂಡು ಹೋಗಿದೆ.

ಇದೇ‌ ಮನೆಗೆ ಕಳೆದ ಅಗಸ್ಟ್ 4ರಂದು ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಅಂದು ಎರಡು ದಿನಗಳ ದಾಳಿಯ ಬಳಿಕ ಬಾಷಾ ಕಿರಿಯ ಪುತ್ರ ಅನಾಸ್‌ ಅಬ್ದುಲ್ ರೆಹಮಾನ್ ನನ್ನು ಬಂಧಿಸಿತ್ತು. ಈ ವೇಳೆ   ಅನಾಸ್ ಪತ್ನಿ ದೀಪ್ತಿ ಆಲಿಯಾಸ್ ಮರಿಯಂ ಳನ್ನೂ
ಪ್ರಶ್ನಿಸಿದ್ದು   ಸಣ್ಣ ಮಗುವಿದ್ದ ಕಾರಣ ಕೇವಲ ವಿಚಾರಣೆ ನಡೆಸಿ ಬಿಡಲಾಗಿತ್ತು.

ದೆಹಲಿಯಲ್ಲಿ ಐಸಿಸ್‌  ಶಂಕಿತ ಉಗ್ರರನ್ನು ಬಂಧಿಸಿದ ನಂತರ ವಿಚಾರಣೆ ವೇಳೆ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗ ಬಿ.ಎಂ.ಬಾಷಾನಿಗೆ ಐಸಿಸ್ ಉಗ್ರರ ಜೊತೆ ನಂಟಿರುವ ಕುರಿತು ಮಾಹಿತಿ ಸಿಕ್ಕಿತ್ತು.  ಇದೇ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಎನ್ಐಎ ಅಧಿಕಾರಿಗಳ ತಂಡ ಉಳ್ಳಾಲದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದರು.

ಇದಿನಬ್ಬ ಪುತ್ರ   ಬಾಷಾರ ಪುತ್ರಿಯ ಮಗಳು ಅಜ್ಮಲ್ ಕುಟುಂಬ ಮೂರು ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿತ್ತು. 2 ವರ್ಷಗಳ ಹಿಂದೆ ಕಾಸರಗೋಡಿನ 17 ಮಂದಿ ಸಿರಿಯಾದ ಐಸಿಸ್ ಉಗ್ರ ಸಂಘಟನೆ ಸೇರಿದ್ದರು. ಇವರ ಪೈಕಿ ಅಜ್ಮಲ್ ಕುಟುಂಬವೂ ಇರಬಹುದು ಎಂದು ಶಂಕಿಸಲಾಗಿತ್ತು.

ಅಜ್ಮಲ್​ಳನ್ನು ಕೇರಳ ಮೂಲದ ಎಂಬಿಎ ಪದವೀಧರ ಸಿಯಾಝ್ ಅವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಈಕೆಯ ಗಂಡ ಸಿಯಾಝ್ ಉನ್ನತ ಶಿಕ್ಷಣಕ್ಕಾಗಿ ಶ್ರೀಲಂಕಾಕ್ಕೆ ಹೋಗುವುದಾಗಿ ಹೋದವರು ಮತ್ತೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಶ್ರೀಲಂಕಾದಿಂದ ಮಸ್ಕತ್ ಹಾಗೂ ಕತಾರ್​ಗೆ ತೆರಳಿ ಅಲ್ಲಿಂದ ಸಿರಿಯಾಕ್ಕೆ ಹೋಗಿ ಐಸಿಸ್ ಸೇರಿದ್ದಾರೆಂಬ ಮಾಹಿತಿ‌ ಇತ್ತು. ವೈದ್ಯನಾಗಿರುವ ಸಿಯಾಝ್‍ನ ಸಹೋದರ ಕೂಡ ಹೆಂಡತಿ ಮತ್ತು ಮಗುವಿನೊಂದಿಗೆ  ಸಿರಿಯಾಗೆ ತೆರಳಿದ್ದ ಎನ್ನಲಾಗಿದೆ.

ಈ ಬಗ್ಗೆ ಕೇರಳ ಆಂತರಿಕ ಭದ್ರತಾ ಹಾಗೂ ಗುಪ್ತಚರ ಇಲಾಖೆ ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ಆರಂಭಿಸಿತ್ತು. ಅದೇ ತನಿಖೆಯ ಮುಂದುವರೆದ ಭಾಗವಾಗಿ ಅಜ್ಮಲ್  ತಂದೆ ಬಾಷಾ ಮನೆಯ ಮೇಲೆ ದಾಳಿ  ನಡೆದಿದೆ ಎಂದು ಎನ್‌ಐಏ ಮೂಲಗಳು ತಿಳಿಸಿವೆ.

ಜಿಲ್ಲೆಯ ಗುಡ್ಡೆಹೊಸೂರು ಮೂಲದ ದೀಪ್ತಿ ಮಾರ್ಲ  ಮಂಗಳೂರಿನ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್‌ ಕೋರ್ಸ್‌ ಅಧ್ಯಯನ ಸಂದರ್ಭದಲ್ಲಿಯೇ  ಆನಾಸ್‌ ಅಬ್ದುಲ್‌ ಎಂಬಾತನನ್ನು ಪ್ರೀತಿಸಿದ್ದಳು. ನಂತರ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಆತನನ್ನೆ  ಮದುವೆ ಆಗಿದ್ದಳು.

ಈಕೆಯ ಗಂಡನ ಕುಟುಂಬದವರು ಮತ್ತು ಕೇರಳದ ಕೆಲ  ಸಂಬಂದಿಕರು ಕೂಡ  ಐಸಿಸ್‌ ನಂಟು ಹೊಂದಿರುವುದು ಖಚಿತವಾಗಿದ್ದು ಅವರನ್ನೂ  ಬಂದಿಸಲಾಗಿದೆ. ಮತಾಂತರದ ನಂತರ ಮರಿಯಂ ಎಂಬ ಹೆಸರಿನೊಂದಿಗೆ ಈಕೆಯು  ಆನ್‌ಲೈನ್‌ ನಲ್ಲಿ  ಐಸಿಸ್‌ ಭಯೋತ್ಪಾದಕ ಸಂಘಟನೆಗೆ ಯುವಕರನ್ನು ಸೇರಿಸುವ  ಮಾಸ್ಟರ್‌ ಮೈಂಡ್‌ ಆಗಿದ್ದಳು ಎಂಬ ಆರೋಪ ಈಕೆಯ ಮೇಲಿದೆ. ಎನ್ಐಎ ತಂಡದ ನೇತೃತ್ವವನ್ನು ದೆಹಲಿ ಎನ್ಐಎ ಡಿಸಿಪಿ ಶ್ರೀಕೃಷ್ಣ ಕುಮಾರ್ ವಹಿಸಿದ್ದರು.

Sneha Gowda

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

5 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

5 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

6 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

6 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

6 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

6 hours ago