Categories: ಮಂಗಳೂರು

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ರಾತ್ರಿ ವೇಳೆಯಲ್ಲಿ ಕಳ್ಳತನ

ಕಡಬ :ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ರಾತ್ರಿವೇಳೆಯಲ್ಲಿ ಕಳ್ಳತನಗಳು ನಡೆಯುತ್ತಲೇ ಇದ್ದು ನಿನ್ನೆ ರಾತ್ರಿ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿರುವ ಘಟನೆ ನಡೆದಿದೆ.

ಗಂಡಿಬಾಗಿಲು ಮಸೀದಿ ಬಳಿ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ದ್ಸಿಕ್ರ್ ಹಲ್ಕಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮ ನಡೆಯುವ ಕಡೆ ಮನೆಯವರು ತೆರಳಿದಾಗ ಈ ಘಟನೆ ನಡೆದಿದೆ.

ಕಾರ್ಯಕ್ರಮವನ್ನು ಮುಗಿಸಿಕೊಂಡು ಮನೆಗೆ ಸಮಯ ರಾತ್ರಿ 11.00 ಗಂಟೆಗೆ ಬಂದು ಮನೆಯ ಬಾಗಿಲಿನ ಬೀಗವನ್ನು ತೆಗೆದು ಒಳಗಡೆ ಬಂದಾಗ ಮನೆಯ ಮನೆಯಲ್ಲಿ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ನಂತರ ನೋಡಲಾಗಿ ಮನೆಯ ಮೇಲಿನ ಸಿಮೆಂಟ್‌ ಶೀಟ್‌ನ್ನು ಯಾರೋ ತೆರೆದು ಮನೆಯೊಳಗೆ ಪ್ರವೇಶಿಸಿರುವುದು ಕಂಡುಬಂದಿದೆ. ಮನೆಯೊಳಗಡೆ ಕಪಾಟ್ ನಲ್ಲಿದ್ದ ಬಟ್ಟೆಗಳು ಸಹ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಅದರಲ್ಲಿದ್ದ 40 ಗ್ರಾಂ ತೂಕದ ಚಿನ್ನದ ನೆಕ್ಲೇಸ್-01, 20 ಗ್ರಾಂ ತೂಕದ ಚಿನ್ನದ ಫಿಟ್‌ ನೆಕ್ಲೇಸ್‌-01, 10 ಗ್ರಾಂ ತೂಕದ 5 ಚಿನ್ನದ ಉಂಗುರಗಳು, ಹಾಗೂ 23 ಗ್ರಾಂ ತೂಕದ ಹೊಸ ಚಿನ್ನದ ನೆಕ್ಲೆಸ್‌-01 ಸೇರಿದಂತೆ ಒಟ್ಟು-93 ಗ್ರಾಂ ತೂಕದ ಚಿನ್ನಾಭರಣ ಹಾಗೂ ಸುಮಾರು 10,700 ರೂಪಾಯಿ ನಗದು ಹಣವನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನಾ ಪಿ ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Swathi MG

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

8 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

18 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

27 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

43 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

49 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago