Categories: ಮಂಗಳೂರು

ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕಿನ  ನೂತನ ಪದಾಧಿಕಾರಿಗಳ ಸಮಾಲೋಚನಾ ಸಭೆ

ಬಂಟ್ವಾಳ : ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕಿನ  ನೂತನ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಬಿ.ಸಿ.ರೋಡ್ ಕನ್ನಡ ಭವನದಲ್ಲಿ ಶನಿವಾರ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಕಸಾಪ ನೂತನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಮಾತನಾಡಿ ಬಂಟ್ವಾಳ ಕಸಾಪ ದ ಜವಾಬ್ದಾರಿ ನನಗೆ ಜಿಲ್ಲಾ ಕಸಾಪ ನೀಡುರುತ್ತದೆ. ಸಿಕ್ಕಿದ ಈ ಅವಕಾಶದಲ್ಲಿ ಸಾಹಿತ್ಯವನ್ನು ಜನಸಾಮಾನ್ಯರ ಬಳಿಗೆ ಒಯ್ಯುವ ಆಲೋಚನೆ ಮತ್ತು ಯೋಜನೆಗಳಿವೆ. ಇದಕ್ಕೆ ಕನ್ನಡ ಸಾಹಿತಿಗಳ, ಕನ್ನಡಾಭಿಮಾನಿಗಳ, ಪರಿಷತ್ ನ  ಪದಾಧಿಕಾರಿಗಳ, ಮಾರ್ಗದರ್ಶಕರ ಸರ್ವರ ಸಹಕಾರ ಅತೀ ಅಗತ್ಯವಾಗಿದೆ ಎಂದರು.

ಇದೇ ವೇಳೆ ಪರಿಷತ್ತಿನ ಪದಾಧಿಕಾರಿಗಳ ಹಾಗೂ ಮಾರ್ಗದರ್ಶಿ ಸಮಿತಿ ಸದಸ್ಯರು ಗಳ ಪಟ್ಟಿಯನ್ನು ಪ್ರಕಟಿಸಲಾಯಿತು.
ಕಸಾಪ ಜಿಲ್ಲಾ ಸಮಿತಿ ಸದಸ್ಯ ಪೂವಪ್ಪ ನೇರಳಕಟ್ಟೆ ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿಗಳಾದ ವಿ.ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ರಮಾನಂದ ನೂಜಿಪ್ಪಾಡಿ ವಂದಿಸಿದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

18 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

36 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

57 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

1 hour ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago