ಮಂಗಳೂರು

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ನಿಧನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ (66) ಅವರು ಅಲ್ಪ ಕಾಲದ ಅಸೌಖ್ಯದಿಂದ ಪದವಿನಂಗಡಿಯಲ್ಲಿರುವ ಸ್ವಗೃಹದಲ್ಲಿ ಬುಧವಾರ ನಿಧನರಾದರು.

ಶಶಿಧರ ಶೆಟ್ಟಿ ಅವರು ತುಳು ಸಂಘಟಕರಾಗಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ, ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ನ ಜಿಲ್ಲಾ ನಾಯಕ, ತುಳುಕೂಟ ಕುಡ್ಲದ ಹಿರಿಯ ಸದಸ್ಯ, ಶಾರದಾ ಕ್ಯಾಟರರ್ಸ್ ಸಂಸ್ಥೆಗಳ ಮಾಲಕ, ಪದವಿ ನಂಗಡಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷ, ಅ.ಭಾ.ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಸಂತಾಪ: ನಿಟ್ಟೆ ಶಶಿಧರ ಶೆಟ್ಟಿ ಅವರ ನಿಧನಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಬಂಟರ ಮಾತೃ ಸಂಘದ ತಾಲೂಕು ಸಮಿತಿಯ ಸಂಚಾಲಕ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‌ಸಾರ್, ಇಂಟರ್ ನ್ಯಾಷನಲ್ ಬಂಟ್ಸ್ ವೇಲ್ಪೇರ್ ಟ್ರಸ್ಟ್ ನ ಗೌರವಾಧ್ಯಕ್ಷ ಎ. ಸದಾನಂದ ಶೆಟ್ಟಿ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ , ಇಂದ್ರಾಳಿ ಜಯಕರ ಶೆಟ್ಟಿ, ದಾಮೋದರ ನಿಸರ್ಗ, ಕದ್ರಿ ನವನೀತ ಶೆಟ್ಟಿ, ಮುಲ್ಕಿ ಕರುಣಾಕರ ಶೆಟ್ಟಿ, ದಿವಾಕರ ಎಸ್.ಶೆಟ್ಟಿ ಸಾಂಗ್ಲಿ, ತಾರಾನಾಥ ಶೆಟ್ಟಿ ಬೋಳಾರ, ಪ್ರದೀಪ್ ಆಳ್ವ ಕದ್ರಿ, ಲೀಲಾಕ್ಷ ಬಿ.ಕರ್ಕೇರ, ಎ.ಸಿ‌.ಭಂಡಾರಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮೃತರ ಪುತ್ರಿ ವಿದೇಶದಿಂದ ಆಗಮಿಸಬೇಕಾಗಿರುವುದರಿಂದ ಜೂನ್ 4 ರಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Gayathri SG

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

34 seconds ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

8 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

25 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

26 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

37 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

38 mins ago