News Karnataka Kannada
Monday, May 06 2024
ಮಂಗಳೂರು

ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ: ಸಿಎಂ ಬೊಮ್ಮಾಯಿ

Bommai (1)
Photo Credit :

 ಮಂಗಳೂರು:‌ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ, ಕಾನೂನು ಕೈಗೆತ್ತಿಕೊಂಡರೆ ಕೂಡಲೇ ಕಠಿಣ ಕ್ರಮ ಕೈಗೊಳ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲವರು ಹಿನ್ನೆಲೆಯಿಂದ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಗಮನಿಸಲು ಹೇಳಿದ್ದೇನೆ.ಡಿಜಿಪಿ ನಿನ್ನೆ ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದಾರೆ. ಕಾನೂನು ಸುವ್ಯವಸ್ಥೆ ಮತ್ತು ಕಾನೂನು ರಕ್ಷಣೆ ಬಗ್ಗೆ ಸೂಚನೆ ಕೊಟ್ಟಿದ್ದಾರೆ ಎಂದರು.

ಮಂಗಳೂರಿನಲ್ಲಿ ಇಂದು ಬಿಜೆಪಿ ವಿಭಾಗೀಯ ಸರಣಿ ಸಭೆಗಳಿವೆ. ಜಿಲ್ಲಾವಾರು ಸಭೆಗಳು ಮತ್ತು ನಾಯಕರ ಸಭೆಗಳಿವೆ. ಚುನಾವಣಾ ತಯಾರಿ ಹಿನ್ನೆಲೆ ವಿಭಾಗ ಮಟ್ಟದ ಸಭೆಗಳನ್ನು ‌ಮಾಡುತ್ತಿದ್ದೇವೆ. ಏ.16 ಮತ್ತು 17 ರಾಜ್ಯ ಕಾರ್ಯಾಕಾರಿಣಿ ಸಭೆ ಮಾಡಿ ಪಕ್ಷದ ಚರ್ಚೆ ಮಾಡುತ್ತೇವೆ ಎಂದರು.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪ್ರಾರಂಭವಾದ ತಕ್ಷಣ ಕುಮಾರಸ್ವಾಮಿ ಜಲಯಾತ್ರೆ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಯಾವುದೇ ಹೇಳಿಕೆ ಕೊಡುವ ಅಗತ್ಯ ಇಲ್ಲ. ಅವರ ಸರ್ಕಾರದಲ್ಲಿ ಏನು ಮಾಡಿದ್ದಾರೆ ಅಂತ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು