ಮಂಗಳೂರು

ಕಾರ್ಪೋರೇಟ್ ಕಂಪೆನಿಗಳ ಹಿತ ಕಾಯುವ ಮೋದಿ ಸರಕಾರದಿಂದ ಕಾರ್ಮಿಕ ವರ್ಗ ಬೀದಿಪಾಲು

ಕಳೆದ 7 ವರ್ಷಗಳಿಂದ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ಸರಕಾರ ಹೆಜ್ಜೆ ಹೆಜ್ಜೆಗೂ ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಯನ್ನು ಕಾಪಾಡುವ ಮೂಲಕ ತನ್ನ‌ ಋಣ ಸಂದಾಯ ಮಾಡುತ್ತಿದೆ. ಜನತೆಗೆ ಒಳ್ಳೆಯ ದಿನಗಳನ್ನು ತರುವುದಾಗಿ ಆಶ್ವಾಸನೆ ನೀಡಿದ ಇದೇ ಸರಕಾರ ಜನರ ಬದುಕುವ ಹಕ್ಕನ್ನೇ ಕಸಿದುಕೊಳ್ಳುತ್ತಿದೆ.
ಮಾತ್ರವಲ್ಲದೆ ಕಾರ್ಮಿಕ ವರ್ಗದ ಕಾನೂನುಗಳನ್ನು ಮಾಲಕರ, ಬಂಡವಾಳಶಾಹಿಗಳ ಪರವಾಗಿ ತಿದ್ದುಪಡಿ ಮಾಡಿ ಮತ್ತೆ ಕಾರ್ಮಿಕ ವರ್ಗವನ್ನು ಜೀತದಾಳುಗಳನ್ನಾಗಿ ಪರಿವರ್ತಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾರ್ಮಿಕ ವಿರೋಧಿ ಸರಕಾರವನ್ನು ಕಿತ್ತೊಗೆಯುವವರೆಗೂ ದುಡಿಯುವ ವರ್ಗ ಒಂದು ಕ್ಷಣನೂ ವಿರಮಿಸಬಾರದು. ಐಕ್ಯತೆಯಿಂದ ಮುನ್ನುಗ್ಗಿ ಸಮರಶೀಲ ಹೋರಾಟದತ್ತ ದಾಪುಗಾಲನ್ನು ಇಡಬೇಕಾಗಿದೆ* ಎಂದು CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು ಹೇಳಿದರು.
ಅವರು CITU ಮಂಗಳೂರು ನಗರ ಮಟ್ಟದ ಪ್ರಮುಖ ಕಾರ್ಯಕರ್ತರಿಗಾಗಿ ಆಯೋಜಿಸಲಾದ ಸಂಘಟನಾ ಕಾರ್ಯಾಗಾರವನ್ನು ಉದ್ಘಾಟಿಸುತ್ತಾ ಈ ಮಾತುಗಳನ್ನು ಹೇಳಿದರು.
CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಕೇಂದ್ರದ ನರೇಂದ್ರ ಮೋದಿ ಸರಕಾರ ಕೋರೋನಾ ಹೆಸರಿನಲ್ಲಿ ದೇಶದ ಜನರನ್ನು ಭಯಭೀತಿಗೊಳಿಸಿದ್ದು ಮಾತ್ರವಲ್ಲದೆ ಕಾರ್ಮಿಕ ವಿರೋಧಿ ನೀತಿಗಳನ್ನು ಸಂಸತ್ತಿನಲ್ಲಿ ಅಂಗೀಕಾರ ಮಾಡಿ ದುಡಿಯುವ ವರ್ಗಕ್ಕೆ ಪಂಗನಾಮ ಹಾಕಿತು. ಈಗಾಗಲೇ ದೇಶದ ಜನತೆ ಕೇಂದ್ರ ಸರಕಾರದ ವಿರುದ್ಧ ತಿರುಗಿ ಬಿದ್ದಿದ್ದು,ದೇಶಾದ್ಯಂತ ಕಾರ್ಮಿಕರ ಹೋರಾಟ, ಆಕ್ರೋಶಗಳು ಮುಗಿಲು ಮುಟ್ಟುತ್ತಿದೆ.ಪೆಬ್ರವರಿ 23,24 ರ ಅಖಿಲ ಭಾರತ ಮಹಾಮುಷ್ಕರವು ಭವಿಷ್ಯದ ಭಾರತಕ್ಕೆ ಹೊಸ ದಿಕ್ಸೂಚಿಯನ್ನು ನೀಡಲಿದೆ* ಎಂದು ಹೇಳಿದರು.
CITU ಮಂಗಳೂರು ನಗರ ಪ್ರದಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರುರವರು ಮಂಗಳೂರು ನಗರದಾದ್ಯಂತ ಅಖಿಲ ಭಾರತ ಮಹಾಮುಷ್ಕರದ ಸಂದೇಶವನ್ನು ಸಾರಲು ವಿವಿಧ ವಿಭಾಗದ ಕಾರ್ಮಿಕರ ಪ್ರದೇಶ ಮಟ್ಟದ ಸಮಾವೇಶ, ಪಾದಯಾತ್ರೆ,ವಾಹನ ಪ್ರಚಾರ ಜಾಥಾ,ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮುಂತಾದ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು CITU ಮಂಗಳೂರು ನಗರಾಧ್ಯಕ್ಷರಾದ ರವಿಚಂದ್ರ ಕೊಂಚಾಡಿಯವರು ವಹಿಸಿದ್ದರು. ಕಾರ್ಯಾಗಾರದಲ್ಲಿ CITU ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ,ಬಾಬು ದೇವಾಡಿಗ,ಭಾರತಿ ಬೋಳಾರ,ಜಯಲಕ್ಷ್ಮಿ ಜಪ್ಪಿನಮೊಗರು, ಸಂತೋಷ್ ಆರ್.ಎಸ್,CITU ನಗರ ಮುಖಂಡರಾದ ವಿಲ್ಲಿ ವಿಲ್ಸನ್, ಹರೀಶ್ ಕೆರೆಬೈಲ್,ಪುಷ್ಪಾ ಶಕ್ತಿನಗರ,ಅಹಮ್ಮದ್ ಭಾವ ಹಾಗೂ ಬೀಡಿ,ಕಟ್ಟಡ, ಬೀದಿಬದಿ, ಹಮಾಲಿ, ಅಟೋರಿಕ್ಷಾ,ಬಿಸಿಯೂಟ ಸಂಘಟನೆಗಳ ಪ್ರಮುಖ ಮುಖಂಡರು ಹಾಜರಿದ್ದರು.
Sneha Gowda

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

21 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

35 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

54 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

2 hours ago