Categories: ಮಂಗಳೂರು

ಕಾರ್ಯನಿರತ ಪತ್ರಕರ್ತರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚುನಾವಣೆಯ ಫಲಿತಾಂಶ ಪ್ರಕಟ

ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ, ಖಜಾಂಚಿಯಾಗಿ ಪುಪ್ಪರಾಜ್ ಅವಿರೋಧ ಆಯ್ಕೆ

ಮಂಗಳೂರು, ಏ.11: ಕಳೆದ ಫೆ.27ರಂದು ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚುನಾವಣೆಯ ಫಲಿತಾಂಶ ಪ್ರಕಟಿಸಲು ರಾಜ್ಯ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.

ಅದರಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಫಲಿತಾಂಶ ಇಂತಿದೆ. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಗನ್ನಾಥ್ ಶೆಟ್ಟಿ ಬಾಳ ಅವಿರೋಧವಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟಾ, ರಾಜೇಶ್ ಕೆ ಪೂಜಾರಿ ಹಾಗೂ ಅನ್ಸಾರ್ ಇನೋಳಿ ಆಯ್ಕೆಯಾಗಿರುತ್ತಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಜಿತೇಂದ್ರ ಕುಂದೇಶ್ವರ ಆಯ್ಕೆಯಾಗಿದ್ದು, ಜಿಲ್ಲಾ ಕಾರ್ಯದರ್ಶಿಗಳಾಗಿ ವಿಜಯ್ ಕೋಟ್ಯಾನ್ , ಗಂಗಾಧರ್ ಕಲ್ಲಪಳ್ಳಿ , ಭುವನೇಶ್ವರ ಗೇರುಕಟ್ಟೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಖಜಾಂಜಿಯಾಗಿ ಪುಷ್ಪರಾಜ್ ಬಿ.ಎನ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸತೀಶ್ ಇರಾ, ಸುಖ್ ಪಾಲ್ ಪೊಳಲಿ, ಕೆ.ವಿಲ್ಪ್ರಡ್ ಡಿ’ಸೋಜ, ಸತ್ಯವತಿ, ರಾಜೇಶ್ ಶೆಟ್ಟಿ, ಭರತ್ ರಾಜ್, ಮೋಹನ್ ಕುತ್ತಾರ್, ಹರೀಶ್ ಕುಲ್ಕುಂದ, ಮಹಮ್ಮದ್ ಆರೀಫ್, ರಾಜೇಶ್ ಕುಮಾರ್ ದಡ್ಡಂಗಡಿ, ಶ್ರವಣ್ ಕುಮಾರ್ ಕೆ, ನಿಶಾಂತ್‌ ಶೆಟ್ಟಿ ಕಿಲೆಂಜೂರು, ಸಂದೇಶ್ ಜಾರ, ಹಿಲರಿ ಕ್ರಾಸ್ತಾ ಪಿ ಹಾಗೂ ಅಶೋಕ್ ಶೆಟ್ಟಿ ಬಿ.ಎನ್ ಆಯ್ಕೆಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ ರವಿರಾಜ್ ಎಚ್.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sneha Gowda

Recent Posts

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

1 min ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

8 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

20 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

57 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

1 hour ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

1 hour ago